Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:25 - ಕನ್ನಡ ಸತ್ಯವೇದವು C.L. Bible (BSI)

25 ತಮ್ಮಾಸೆ ಕೈಗೂಡಿತೆನಲು ಅವರಿಗಿರಬಾರದು ಅವಕಾಶ I ಅವನನು ಕಬಳಿಸಿಬಿಟ್ಟೆವು ಎಂದು ಕೊಚ್ಚಿಕೊಳ್ಳುವ ಸಂತೋಷ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ನುಂಗಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವರು, “ಆಹಾ! ನಾವು ಬಯಸಿದ್ದನ್ನೇ ಪಡೆದೆವು!” ಎಂದು ಹೇಳಲು ಅವಕಾಶಕೊಡಬೇಡ. “ನಾವು ಅವನನ್ನು ನಾಶಮಾಡಿದೆವು!” ಎಂದು ಹೇಳಲು ಅವರಿಗೆ ಆಸ್ಪದ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ತಮ್ಮ ಹೃದಯದಲ್ಲಿ, “ಆಹಾ, ನಮ್ಮ ಇಷ್ಟವೇ ನೆರವೇರಿತು,” ಎಂದು ಹೇಳದಿರಲಿ; “ಅವನನ್ನು ನುಂಗಿಬಿಟ್ಟೆವು,” ಎಂದೂ ಅವರು ಹೇಳದೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:25
16 ತಿಳಿವುಗಳ ಹೋಲಿಕೆ  

ನಿನ್ನನ್ನು ನೋಡಿ ಶತ್ರುಗಳೆಲ್ಲರು ಕಟಕಟನೆ ಹಲ್ಲು ಕಡಿಯುತ್ತಾರಲ್ಲಾ ಬಾಯಿ ಕಿಸಿದು ! “ಹಾ, ಆಕೆಯನ್ನು ಕಬಳಿಸಿಬಿಟ್ಟೆವು ಈ ದಿನಕ್ಕಾಗಿಯೆ ನಾವು ಕಾದಿದ್ದೆವು ಈಗ ಅದನ್ನು ಕಣ್ಣಾರೆ ಕಂಡೆವು” ಎಂದು ಕೊಚ್ಚಿಕೊಳ್ಳುತ್ತಾರಲ್ಲಾ !


ಉರಿಗೊಳ್ಳುತಿದ್ದರು ಕಡುಗೋಪದಿಂದ ಖಂಡಿತ I ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ II


ಅಳಿದುಹೋಗುವಂಥದ್ದು ಅಮರತ್ವವನ್ನೂ ಮರ್ತ್ಯವಾದುದು ಅಮರ್ತ್ಯವನ್ನೂ ಧರಿಸಿಕೊಂಡಾಗ ಪವಿತ್ರಗ್ರಂಥದ ಈ ವಾಕ್ಯ ನೆರವೇರುವುದು:


ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ?


ಆಗ, ಅಲ್ಲೇ ಕುಳಿತಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನೇಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ! ದೇವರೊಬ್ಬರ ಹೊರತು ಪಾಪಗಳನ್ನು ಕ್ಷಮಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮ ಮನಸ್ಸಿನಲ್ಲೇ ಆಲೋಚಿಸಿಕೊಳ್ಳುತ್ತಿದ್ದರು.


ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.


ನೆರವೇರಿಸಬೇಡ ದುರುಳರ ಕೋರಿಕೆಯನು I ಕೈಗೂಡಿಸಬೇಡ ಪ್ರಭು, ಅವರ ಕುಯುಕ್ತಿಯನು II


‘ನಾಶ ಮಾಡೋಣ ಈ ಜನರನು’ ಎಂದಾಡಿಕೊಂಡಿಹರು I ದೇಶದ ಸಭಾಮಂದಿರಗಳನ್ನೆಲ್ಲ ಭಸ್ಮಮಾಡಿಹರು II


ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II


ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II


ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II


ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.


ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


“ಆಹಾಹಾ” ಎಂದೆನ್ನ ಜರೆಯುವವರು I ಬೆಂಗೊಟ್ಟು ಓಡಲಿ ಆ ಲಜ್ಜೆಗೆಟ್ಟವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು