Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:27 - ಕನ್ನಡ ಸತ್ಯವೇದವು C.L. Bible (BSI)

27 ನನಗೆ ನ್ಯಾಯ ಬಯಸುವವರು ನಲಿದು ಮಾಡಲಿ ಜಯಕಾರ I “ದಾಸನ ಹಿತೈಷಿ ಪ್ರಭುಗೆ, ಜೈ” ಎಂಬ ನಿರಂತರ ಪ್ರಚಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು ಆನಂದದೊಡನೆ ಜಯಧ್ವನಿಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು ಆನಂದದೊಡನೆ ಜಯಧ್ವನಿ ಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನನಗೆ ನ್ಯಾಯ ದೊರೆಯಲೆಂದು ಅಪೇಕ್ಷಿಸುವವರು ಸಂತೋಷಪಡಲಿ. “ಯೆಹೋವನು ಎಷ್ಟೋ ದೊಡ್ಡವನು! ಆತನು ತನ್ನ ಸೇವಕನಿಗೆ ಅತ್ಯುತ್ತಮವಾದುದನ್ನೇ ಮಾಡಿದನು” ಎಂದು ಅವರು ಹೇಳುತ್ತಲೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನನ್ನ ನೀತಿಯಲ್ಲಿ ಸಂತೋಷಪಡುವವರು ಉತ್ಸಾಹಧ್ವನಿ ಮಾಡಿ, ಆನಂದಪಡಲಿ; “ಹೌದು, ತಮ್ಮ ಸೇವಕನ ಅಭಿವೃದ್ಧಿಯಲ್ಲಿ ಸಂತೋಷಪಡುವ ಯೆಹೋವ ದೇವರು ಮಹಿಮೆಪಡಲಿ,” ಎಂದು ಅವರು ಯಾವಾಗಲೂ ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:27
20 ತಿಳಿವುಗಳ ಹೋಲಿಕೆ  

ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II


ನಿನ್ನನು ಅರಸುವವರೆಲ್ಲರು ಹರ್ಷಾನಂದಗೊಳ್ಳಲಿ I ನಿನ್ನ ರಕ್ಷಣಾಪ್ರಿಯರು ಸತತ “ಪ್ರಭು ಪರಾಕ್ರಮಿ” ಎನ್ನಲಿ II


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ನಿನ್ನ ದರ್ಶನಾರ್ಥಿಗಳು ಹರ್ಷಿಸಲಿ, ನಿನ್ನಲಿ ನಲಿದು ಆನಂದಿಸಲಿ I ನಿನ್ನ ಉದ್ಧಾರಕ ಶಕ್ತಿ ಪ್ರಿಯರು ಸತತ “ದೇವನಿಗೆ ಉಘೇ” ಎನ್ನಲಿ II


ನನ್ನಲ್ಲಿವೆ ಶ್ರೀಮಂತಿಕೆ ಮತ್ತು ಘನತೆ ಶಾಶ್ವತ ಸಂಪತ್ತು ಹಾಗೂ ಸಮೃದ್ಧಿ.


ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.


ಬಿಡಿಸು ಸೆರೆಯಿಂದೆನ್ನನು, ಭಜಿಸುವೆನು ನಿನ್ನ ನಾಮವನು I ಸಜ್ಜನರ ಸಭೆಯಲಿ ಕೊಂಡಾಡುವೆನು ನಿನ್ನ ಉಪಕಾರವನು II


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ.


ಹೊದಿಸುವೆನಿದರ ಯಾಜಕರಿಗೆ ರಕ್ಷಣಾವಸ್ತ್ರವನು I ಸಾಧುಸಂತರು ಮಾಡುವರಿದರ ಹರ್ಷೋದ್ಗಾರವನು II


ಸಜ್ಜನರಾದರೊ ಸಂತೋಷಿಸಲಿ I ದೇವರ ಮುಂದೆ ಆನಂದಿಸಲಿ I ಅತುಳ ಹರ್ಷಾನಂದಗೊಳ್ಳಲಿ II


ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II


ನ್ಯಾಯಪೀಠದಲಿ ಕುಳಿತೆನ್ನ ವ್ಯಾಜ್ಯ ತೀರಿಸಿದೆ I ನೀತಿಗನುಸಾರವಾಗಿ ನ್ಯಾಯ ಸ್ಥಾಪಿಸಿದೆ II


ನೀತಿಭೂಷಿತರಾಗಲಿ ನಿನ್ನ ಯಾಜಕರು I ಆನಂದ ಘೋಷಮಾಡಲಿ ನಿನ್ನ ಭಕ್ತಜನರು II


ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II


ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು