Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:3 - ಕನ್ನಡ ಸತ್ಯವೇದವು C.L. Bible (BSI)

3 ತಡೆ ನೀನು ಬಿಲ್ಲು ಬರ್ಜಿಯಿಂದ ಬೆನ್ನಟ್ಟಿಬರುವ ವೈರಿಯನು I ನೀಡೆನ್ನ ಮನಕೆ, ನೀನೆ ರಕ್ಷಕನೆಂಬ ಅಭಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಭಲ್ಲೆಯನ್ನೂ ಯುದ್ಧದ ಕೊಡಲಿಯನ್ನೂ ಹಿಡಿದು ನನ್ನನ್ನು ಹಿಂದಟ್ಟುವ ವೈರಿಗಳನ್ನು ಪ್ರತಿಭಟಿಸು; ನಾನೇ ನಿನ್ನನ್ನು ರಕ್ಷಿಸುವೆನೆಂದು ಅಭಯಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈಟಿಯನ್ನೂ ಭಲ್ಲೆಯನ್ನೂ ತೆಗೆದುಕೊ. ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿರುವ ವೈರಿಗಳೊಡನೆ ಹೋರಾಡು. “ನಾನು ನಿನ್ನನ್ನು ರಕ್ಷಿಸುತ್ತೇನೆ” ಎಂಬ ಅಭಯವಚನ ನೀಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬರ್ಜಿಯನ್ನೂ ಭಲ್ಲೆಯನ್ನೂ ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿರಿ. “ನಾನೇ ನಿಮ್ಮ ರಕ್ಷಣೆ” ಎಂದು ನನಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:3
13 ತಿಳಿವುಗಳ ಹೋಲಿಕೆ  

ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು I ನಾನು ನೀಡುವ ಮುಕ್ತಿಯನವನಿಗೆ ಮನಗಾಣಿಸುವೆನು” II


ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು I ವಿಧೇಯನಾಗಿ ನಡೆವ ಸಿದ್ಧಮನಸ್ಸನು ನೀಡು II


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಉದ್ಧಾರಕೆ, ಗೌರವಕೆ ಎನಗಾಧಾರ ದೇವನೆ I ಭದ್ರವಾದ ಬಂಡೆ, ನನಗಾಶ್ರಯ ಆತನೆ II


ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.


ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು