Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:4 - ಕನ್ನಡ ಸತ್ಯವೇದವು C.L. Bible (BSI)

4 ನನ್ನ ಕೊಲೆಗೆ ಯತ್ನಿಸುವವನು ತಲೆ ತಗ್ಗಿಸಲಿ ನಿರಾಶೆಗೊಂಡು I ನನಗೆ ಕೇಡನು ಮಾಡುವವರು ಓಡಿಹೋಗಲಿ ಗಲಿಬಿಲಿಗೊಂಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಯೋಚಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:4
15 ತಿಳಿವುಗಳ ಹೋಲಿಕೆ  

“ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II


ಸಿಯೋನನ್ನು ದ್ವೇಷಿಸುವ ಜನ I ಹಿಂದಿರುಗಲಿ ಪಡೆದು ಅಪಮಾನ II


ನನಗೆ ಕೇಡು ಬಗೆದವರಿದೋ ಪಡೆದರು ನಿಂದೆ ಅಪಮಾನವನು I ದಿನವೆಲ್ಲ ವರ್ಣಿಪುದೆನ್ನ ನಾಲಿಗೆ ನಿನ್ನೀ ನೀತಿಸಾಧನೆಯನು II


ಆದ್ದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಟ್ಟಾದ ಸ್ಥಳಗಳನ್ನು ಗೊತ್ತುಮಾಡಿಕೊಂಡು ಖಚಿತವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ನಾಡಿನಲ್ಲಿ ಇರುವುದಾದರೆ ಯೆಹೂದ ಪ್ರಜೆಗಳ ಮಧ್ಯದಲ್ಲೆಲ್ಲಾ ಹುಡುಕಿ ಅವನನ್ನು ಹಿಡಿಯುವೆನು,” ಎಂದನು.


“ನಾನೇ ಆತನು,” ಎಂದು ಯೇಸು ನುಡಿಯುತ್ತಲೇ, ಅವರೆಲ್ಲರೂ ಹಿಂದೆ ಸರಿದು ನೆಲದ ಮೇಲೆ ಬಿದ್ದರು.


ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”


ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು