Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:5 - ಕನ್ನಡ ಸತ್ಯವೇದವು C.L. Bible (BSI)

5 ಬಿರುಗಾಳಿಗೆ ತರಗೆಲೆಯಂತೆ ತೂರಿಹೋಗಲಿ I ಪ್ರಭುವಿನ ದೂತನವರನು ಬೆನ್ನಟ್ಟಿ ಹೋಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ನೂಕಿಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ಗಾಳಿಬಡಿದುಕೊಂಡು ಹೋಗುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಹಿಂದಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಗಾಳಿಗೆ ಹಾರುವ ಹೊಟ್ಟಿನ ಹಾಗೆ ಆಗಲಿ; ಯೆಹೋವ ದೇವರ ದೂತನು ಅವರನ್ನು ಹಿಂದಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:5
12 ತಿಳಿವುಗಳ ಹೋಲಿಕೆ  

ಅವರು ಗಾಳಿಗೆ ತೂರಿಹೋದ ಹುಲ್ಲಾದುದು ಎಷ್ಟು ಸಲ? ಬಿರುಗಾಳಿ ಕೊಚ್ಚಿಕೊಂಡುಹೋದ ಹೊಟ್ಟಾದುದು ಎಷ್ಟು ಸಲ?


ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.


ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಇವರು ಪ್ರಾತಃಕಾಲದ ಮೋಡದಂತೆ ಮಾಯವಾಗುತ್ತಾರೆ. ಇಬ್ಬನಿಯಂತೆ ಕರಗಿಹೋಗುತ್ತಾರೆ. ಬಿರುಗಾಳಿಗೆ ಸಿಕ್ಕಿದ ಹೊಟ್ಟಿನಂತೆ ತೂರಿಹೋಗುತ್ತಾರೆ; ಗವಾಕ್ಷಿಯ ಹೊಗೆಯಂತೆ ಗಾಳಿಯಲ್ಲಿ ತೇಲಿಹೋಗುತ್ತಾರೆ.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II


ಇಸ್ರಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ಸ್ಥಳ ಬದಲಾಯಿಸಿ ಅವರ ಹಿಂದಕ್ಕೆ ಬಂದನು. ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ನಿನ್ನ ಕನಲಿನಲೇ ಕಳೆದಿವೆ ನಮ್ಮ ದಿನಗಳು I ನಿಟ್ಟುಸಿರಿನಂತೆ ಮುಗಿವುದೆಮ್ಮ ಬದುಕುಬಾಳು II


ಸಿಟ್ಟುಗೊಂಡು ಅವರನ್ನು ಹಿಂದಟ್ಟು ನಿನ್ನ ಆಕಾಶದ ಕೆಳಗಿನಿಂದ ಅವರನ್ನು ಅಳಿಸಿಹಾಕು".


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು