Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:7 - ಕನ್ನಡ ಸತ್ಯವೇದವು C.L. Bible (BSI)

7 ನಿಷ್ಕಾರಣ ಕೊಲೆಮಾಡಲೆನ್ನ ಬಲೆಯೊಡ್ಡಿಹರು I ಆ ಕಾರಣ ಪ್ರಾಣ ತೆಗೆಯಲು ಗುಂಡಿ ತೋಡಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಅಕಾರಣವಾಗಿ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಕಾರಣವಿಲ್ಲದೆ ತಮ್ಮ ಬಲೆಯನ್ನು ನನಗೆ ಒಡ್ಡಿದ್ದಾರೆ; ಕಾರಣವಿಲ್ಲದೆ ನನಗೆ ಗುಂಡಿಯನ್ನು ಅಗೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:7
11 ತಿಳಿವುಗಳ ಹೋಲಿಕೆ  

“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ಬಿದ್ದರು ಹೊರನಾಡಿಗರು ತಾವು ತೋಡಿದ ಗುಣಿಯಲೆ I ಸಿಕ್ಕಿಕೊಂಡಿತವರ ಕಾಲು ಅವರೊಡ್ಡಿದ ಬಲೆಯಲೆ II


ಅವನನ್ನು ಅವನ ಕಾಲುಗಳೆ ಬಲೆಗೆ ಬೀಳಿಸುವುವು ಅವನನ್ನು ಪಾಳುಗುಂಡಿಯ ಮೇಲೆ ನಡೆಸುವುವು.


ಗುಂಡಿ ಅಗೆದಿಹರು ಎನಗೆ ಗರ್ವಿಷ್ಠರು I ಧರ್ಮಶಾಸ್ತ್ರ ಪಾಲಿಸದ ಆ ದುರುಳರು II


ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ಗುಟ್ಟಾದೆಡೆಯಿಂದ ಗುರಿಯಿಟ್ಟಿಹರು ನಿರಪರಾಧಿಗಳನೆ I ಅಂಜದೇ ಅಳುಕದೆ ಎಸೆವರು ಬಾಣಗಳನು ತಟ್ಟನೆ II


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ನಾ ರಚಿಸುವೆ ಗಾಯನ II


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು