Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:8 - ಕನ್ನಡ ಸತ್ಯವೇದವು C.L. Bible (BSI)

8 ಒಡ್ಡಿದ ಬಲೆಯಲಿ ಒಡ್ಡಿದವನೇ ಪಟಕ್ಕನೆ ಸಿಕ್ಕಿಬೀಳಲಿ I ತೋಡಿದ ಗುಣಿಯಲಿ ತೋಡಿದವನೇ ತಟಕ್ಕನೆ ಬಿದ್ದುಹೋಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನಿಗೆ ನಾಶನವು ಅಕಸ್ಮಾತ್ತಾಗಿ ಬರಲಿ; ತಾನು ಒಡ್ಡಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನೇ ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗರಿಸಿ ಬೀಳಲಿ. ಇದ್ದಕ್ಕಿದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾಶವು ಅವರಿಗೆ ಅನಿರೀಕ್ಷಿತವಾಗಿ ಬರಲಿ; ಅವರು ಅಡಗಿಸಿಟ್ಟ ಬಲೆಯು ಅವರನ್ನೇ ಹಿಡಿಯಲಿ; ವಿನಾಶನಕ್ಕಾಗಿ ಅವರು ಗುಂಡಿಯಲ್ಲಿ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:8
18 ತಿಳಿವುಗಳ ಹೋಲಿಕೆ  

“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಬಿದ್ದರು ಹೊರನಾಡಿಗರು ತಾವು ತೋಡಿದ ಗುಣಿಯಲೆ I ಸಿಕ್ಕಿಕೊಂಡಿತವರ ಕಾಲು ಅವರೊಡ್ಡಿದ ಬಲೆಯಲೆ II


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.


ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ಒಂದು ದಿನ ಸೌಲನು, “ಇವನು ನನ್ನ ಕೈಯಿಂದ ಸಾಯಬಾರದು; ಫಿಲಿಷ್ಟಿಯರ ಕೈಯಿಂದಲೇ ಸಾಯಲಿ,” ಎಂದು ಒಂದು ಉಪಾಯ ಹೂಡಿದನು. ದಾವೀದನಿಗೆ, “ನೀನು ನನ್ನ ವೀರನಾಗಿ ಹೋಗಿ ಸರ್ವೇಶ್ವರನ ಯುದ್ಧಗಳನ್ನು ನಡೆಸು; ನಾನು ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಮದುವೆಮಾಡಿಕೊಡುತ್ತೇನೆ,” ಎಂದನು.


ಆದರೆ ಎಸೆವನು ಬಾಣವನು ದೇವನೆ I ಪಡೆವರು ಅಪಘಾತವನು ಫಕ್ಕನೆ II


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು