Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:9 - ಕನ್ನಡ ಸತ್ಯವೇದವು C.L. Bible (BSI)

9 ಆಗೆನ್ನ ಮನವು ಆನಂದಗೊಳ್ಳುವುದು ಪ್ರಭುವಿನಲಿ I ಆಹ್ಲಾದಗೊಳ್ಳುವುದು ಆತನಿತ್ತಾ ರಕ್ಷಣೆಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವದು; ಆತನಿಂದಾದ ರಕ್ಷಣೆಯ ನಿವಿುತ್ತ ಆನಂದಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ನಾನು ಯೆಹೋವನಲ್ಲಿ ಹರ್ಷಿಸುವೆನು. ಆತನು ನನ್ನನ್ನು ರಕ್ಷಿಸಿದ್ದರಿಂದ ಸಂತೋಷಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನನ್ನ ಪ್ರಾಣವು ಯೆಹೋವ ದೇವರಲ್ಲಿ ಉಲ್ಲಾಸಗೊಂಡು, ದೇವರ ರಕ್ಷಣೆಯಲ್ಲಿ ಸಂತೋಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:9
15 ತಿಳಿವುಗಳ ಹೋಲಿಕೆ  

ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ I ಯೆಹೂದ್ಯ ನಗರಗಳು ಆನಂದಪಡಲಿ I ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ II


ನೆಮ್ಮದಿಯಿಂದಿದೆ ಎನ್ನ ಮನ ಆತನಲಿ I ನಂಬಿರುವೆವು ಆತನ ಶ್ರೀ ನಾಮದಲಿ II


ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II


ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ಬಿದ್ದರು ಹೊರನಾಡಿಗರು ತಾವು ತೋಡಿದ ಗುಣಿಯಲೆ I ಸಿಕ್ಕಿಕೊಂಡಿತವರ ಕಾಲು ಅವರೊಡ್ಡಿದ ಬಲೆಯಲೆ II


ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು