Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 36:10 - ಕನ್ನಡ ಸತ್ಯವೇದವು C.L. Bible (BSI)

10 ನಿನ್ನನರಿತವರನು ಪ್ರೀತಿಸು ಮುಂದಕ್ಕೂ I ಒಳಿತನ್ನು ಮಾಡು ನೇರಮನಸ್ಕರಿಗೂ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ. ಯಥಾರ್ಥವಂತರಿಗೆ ಒಳ್ಳೆಯದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮನ್ನು ತಿಳಿದವರಿಗೆ ನಿಮ್ಮ ಪ್ರೀತಿಯು ಮುಂದುವರೆಯಲಿ ಯಥಾರ್ಥ ಹೃದಯದವರಿಗೆ ನಿಮ್ಮ ನೀತಿಯೂ ನೆಲೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 36:10
17 ತಿಳಿವುಗಳ ಹೋಲಿಕೆ  

ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


‘ಸರ್ವೇಶ್ವರನನ್ನು ಅರಿತುಕೊಳ್ಳಿರಿ’ ಎಂದು ನೆರೆಯವನಿಗಾಗಲಿ, ಸೋದರನಿಗಾಗಲಿ ಯಾರೂ ಬೋಧಿಸಬೇಕಾಗಿಲ್ಲ. ಹಿರಿಯಕಿರಿಯರು ಎಲ್ಲರೂ ನನ್ನನ್ನು ಅರಿಯುವರು.


ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.


ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು