Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 36:12 - ಕನ್ನಡ ಸತ್ಯವೇದವು C.L. Bible (BSI)

12 ಕೇಡು ಮಾಡಿದವರಿದೋ ಕೆಳಗೆ ಬಿದ್ದಿಹರು I ಮರಳಿ ಏಳಲಾಗದೆ ಮಡಿದು ಬಿದ್ದಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ದುಷ್ಟರು ಬಿದ್ದು ಜಜ್ಜಲ್ಪಟ್ಟದ್ದು ಇಲ್ಲಿಯೇ. ಅವರು ಮತ್ತೆಂದಿಗೂ ಮೇಲೇಳುವುದಿಲ್ಲ” ಎಂದು ಅವರ ಸಮಾಧಿಯ ಮೇಲೆ ಬರೆಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೇಡು ಮಾಡುವವರು ಬಿದ್ದಿದ್ದಾರೆ. ಅವರು ಏಳಲಾರದೆ ಕೆಳಗೆ ಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 36:12
12 ತಿಳಿವುಗಳ ಹೋಲಿಕೆ  

ಎಂದೇ ನಿಲ್ಲಲಾರರು ದುರುಳರು ನ್ಯಾಯಸ್ಥಾನದಲಿ I ಸದಸ್ಯರಾಗರು ಪಾಪಿಗಳು ಸಜ್ಜನರ ಸಂಘದಲಿ II


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.


ಸುರಿಯಲಿ ಆ ಜನರ ಮೇಲೆ ಉರಿಉರಿವ ಬೆಂಕಿಕೆಂಡ I ಅವರೇಳದಂತೆ ಸೇರಲಿ ಪಾತಾಳದ ಅಗ್ನಿಕುಂಡ II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಅವರನು ಮತ್ತೆ ಏಳದಂತೆ ಹೊಡೆದೆ I ಅವರು ಕಾಲಿಗೆ ಬೀಳುವಂತೆ ಮಾಡಿದೆ II


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು