Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:12 - ಕನ್ನಡ ಸತ್ಯವೇದವು C.L. Bible (BSI)

12 ದುರ್ಜನನು ಹೂಡಿಹನು ಒಳಸಂಚು ಸಜ್ಜನನ ವಿರುದ್ಧ I ಕಟಕಟನೆ ಹಲ್ಲು ಕಡಿಯುತಿಹನಿದೋ ಆತನ ವಿರೋಧ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದುಷ್ಟನು ನೀತಿವಂತನಿಗೆ ವಿರೋಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದುಷ್ಟರು ನೀತಿವಂತರ ವಿರುದ್ಧ ದುರಾಲೋಚನೆಗಳನ್ನು ಮಾಡುವರು. ನೀತಿವಂತರ ಮೇಲೆ ತಮಗಿರುವ ಕೋಪದಿಂದ ಅವರು ಹಲ್ಲುಕಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ, ಆದರೆ ಅವನನ್ನು ಕಂಡು ಹಲ್ಲು ಕಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:12
16 ತಿಳಿವುಗಳ ಹೋಲಿಕೆ  

ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ಅಣಕಿಸಿ ಹಾಸ್ಯಮಾಡಿದರು ಕೀಟಲೆಗಾರರಂತೆ I ಕಟಕಟನೆ ಹಲ್ಲುಕಡಿದರು ಕಡುಕೋಪಿಗಳಂತೆ II


ಆತನ ಪವಿತ್ರಾಲಯವನ್ನು ಕೆಡವಿತು. ಅನುದಿನದ ಬಲಿಯರ್ಪಣೆಯನ್ನು ಅಡಗಿಸುವುದಕ್ಕಾಗಿ ನೀಚತನದಿಂದ ಒಂದು ಸೈನ್ಯವನ್ನೆಬ್ಬಿಸಿತು. ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿತು. ತನ್ನ ಇಷ್ಟಾರ್ಥವನ್ನು ಈಡೇರಿಸಿಕೊಂಡು ವೃದ್ಧಿಗೆ ಬಂದಿತು.


ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II


ಆ ಗಳಿಗೆಯಿಂದ ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯುತ್ತಾ ಇದ್ದನು.


ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಸಮಾಲೋಚಿಸಿಕೊಂಡರು.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.


ಅವನು ಮೊರ್ದೆಕೈ ಒಬ್ಬನ ಮೇಲೆ ಕೈಮಾಡುವುದು ಸಾಲದೆಂದೆಣಿಸಿ ಇವನು ಯೆಹೂದ್ಯ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಇವನ ಬಂಧುಬಳಗದವರನ್ನೆಲ್ಲಾ, ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಲು ತೀರ್ಮಾನಿಸಿದನು.


“ಇವಳನ್ನು ಅವನಿಗೆ ಕೊಡುತ್ತೇನೆ. ಈಕೆ ಅವನಿಗೆ ಉರುಲಾಗಿರಬಲ್ಲಳು; ಫಿಲಿಷ್ಟಿಯರ ಕೈಗೆ ಇವನು ಸಿಕ್ಕಿಬೀಳುವಂತೆ ಮಾಡಬಲ್ಲಳು,” ಎಂದುಕೊಂಡನು. ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೇ ಸಂದರ್ಭ ಬಂದೊದಗಿದೆ,” ಎಂದು ಹೇಳಿದನು.


ದುಷ್ಟನಿಟ್ಟಿರುವನು ಕಣ್ಣನು ಸಜ್ಜನರ ಮೇಲೆ I ಹೊಂಚುಹಾಕಿ ನೋಡುತಿಹನು ಮಾಡಲವರ ಕೊಲೆ II


ಜೋಸೆಫನ ದಣಿ ಮನೆಗೆ ಬರುವವರೆಗೂ ಆ ಬಟ್ಟೆಯನ್ನು ತನ್ನಲ್ಲೇ ಇಟ್ಟುಕೊಂಡಿದ್ದಳು.


ಮೊರ್ದೆಕೈಯು ತನಗೆ ಬಾಗಿ ನಮಸ್ಕಾರ ಮಾಡದಿದ್ದುದನ್ನು ಕಂಡು ಹಾಮಾನನು ಅವನ ಮೇಲೆ ಕಡುಗೋಪಗೊಂಡನು.


ಆದರೂ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಿಲಿನಲ್ಲಿ ತನ್ನ ಕಣ್ಣೆದುರು ಕುಳಿತಿರುವವರೆಗೂ ತನಗೆ ಯಾವ ಪ್ರಯೋಜನವೂ ಇಲ್ಲವೆಂದು ಹೇಳಿದನು.


ತನ್ನ ದಾಸರನು ಉದ್ಧಾರಮಾಡದಿರನು ಪ್ರಭು I ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು