ಕೀರ್ತನೆಗಳು 37:14 - ಕನ್ನಡ ಸತ್ಯವೇದವು C.L. Bible (BSI)14 ಹಿಡಿದಿಹರು ದುರುಳರು ಕತ್ತಿಯನು, ಎತ್ತಿಹರು ಬಿಲ್ಲನು I ಕೆಡಹಲು ದೀನದಲಿತರನು, ಕೊಲ್ಲಲು ಸಜ್ಜನರನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದುಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದುಷ್ಟರು ಬಡವನನ್ನೂ ದೀನನನ್ನೂ ಬೀಳಿಸಬೇಕೆಂದು ಖಡ್ಗವನ್ನು ಹಿರಿದಿದ್ದಾರೆ, ಸನ್ಮಾರ್ಗದವರನ್ನು ಕೊಲ್ಲುವುದಕ್ಕೂ ತಮ್ಮ ಬಿಲ್ಲುಗಳನ್ನು ಬಗ್ಗಿಸಿದ್ದಾರೆ. ಅಧ್ಯಾಯವನ್ನು ನೋಡಿ |
ಅದಕ್ಕೆ ಅವನ ಪತ್ನಿ ಜೆರೆಷಳೂ ಹಾಗೂ ಅವನ ಆಪ್ತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಗಲ್ಲಿಗೇರಿಸುವ ಸಲುವಾಗಿ ಇಪ್ಪತ್ತೆರಡು ಮೀಟರ್ ಉದ್ದದ ಗಲ್ಲುಮರವೊಂದನ್ನು ಸಿದ್ಧಮಾಡಿಸಿರಿ. ಅನಂತರ ನೀವು ನೆಮ್ಮದಿಯಿಂದ ಅರಸನ ಜೊತೆ ಔತಣಕ್ಕೆ ಹೋಗಬಹುದು,” ಎಂದು ಸಲಹೆ ನೀಡಿದರು. ಅದು ಅವನಿಗೆ ಸಮರ್ಪಕವಾಗಿ ಕಂಡುಬರಲು ಹಾಮಾನನು ಅದರಂತೆಯೇ ಗಲ್ಲುಮರವನ್ನು ಸಿದ್ಧಮಾಡಿಸಿದನು.