Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:16 - ಕನ್ನಡ ಸತ್ಯವೇದವು C.L. Bible (BSI)

16 ದುರುಳರ ವಿಪುಲ ಆಸ್ತಿಪಾಸ್ತಿಗಿಂತಲು I ಸತ್ಯವಂತರ ಬಡತನವೆನಿತೊ ಮಿಗಿಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದುಷ್ಟನ ಶ್ರೀಮಂತಿಕೆಗಿಂತಲೂ ನೀತಿವಂತನ ಬಡತನವೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದುಷ್ಟರ ಐಶ್ವರ್ಯಕ್ಕಿಂತ ನೀತಿವಂತರ ಅಲ್ಪವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:16
9 ತಿಳಿವುಗಳ ಹೋಲಿಕೆ  

ಅನ್ಯಾಯದಿಂದ ಗಳಿಸಿದ ಅಪಾರ ನಿಧಿಗಿಂತಲು ನ್ಯಾಯದಿಂದ ಕೂಡಿಸಿದ ಅಲ್ಪ ಧನ ಲೇಸು.


ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ.


ನೀತಿವಂತನು ಹೊಟ್ಟೆತುಂಬ ಉಣ್ಣುವನು; ದುಷ್ಟನ ಹೊಟ್ಟೆ ಹಸಿವಿನಿಂದ ಬಳಲುವುದು.


ದುರುಳರ ಮನೆಯನ್ನು ಸರ್ವೇಶ್ವರ ಶಪಿಸುವನು; ನೀತಿವಂತರ ನಿವಾಸವನ್ನು ಆತ ಆಶೀರ್ವದಿಸುವನು.


ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.


ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎರಡು ಕೈಹಿಡಿ ವ್ಯರ್ಥ ಪರಿಶ್ರಮಕ್ಕಿಂತ ಒಂದೇ ಕೈಹಿಡಿಯಷ್ಟು ಸಂಪಾದನೆ ಪಡೆದು ನೆಮ್ಮದಿಯಿಂದಿರುವುದು ಲೇಸು.


ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು