Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:18 - ಕನ್ನಡ ಸತ್ಯವೇದವು C.L. Bible (BSI)

18 ಸಜ್ಜನರಿಗೆ ಸಿಗುವ ಸೊತ್ತು ಶಾಶ್ವತ I ಪ್ರಭುವಿಗೆ ಗೊತ್ತು ಅವರ ಬಾಳಿನಂತ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನು ಸದ್ಭಕ್ತರ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವಾಸ್ತ್ಯವು ಶಾಶ್ವತವಾಗಿ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ತನ್ನ ಭಕ್ತರನ್ನು ಅವರ ಜೀವಮಾನ ಪೂರ್ತಿ ಕಾಪಾಡುವನು. ಅವರ ಭೂಮಿಯು ಸದಾಕಾಲ ಅವರದೇ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿರ್ದೋಷಿಗಳು ತಮ್ಮ ದಿವಸಗಳನ್ನು ಯೆಹೋವ ದೇವರ ಪರಾಮರಿಕೆಯಲ್ಲಿ ಕಳೆಯುವರು. ನಿರಪರಾಧಿಯ ಬಾಧ್ಯತೆಯು ಯುಗಯುಗಕ್ಕೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:18
22 ತಿಳಿವುಗಳ ಹೋಲಿಕೆ  

ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II


ಆಪತ್ಕಾಲದಲಿ ನಾನೇಕೆ ಭಯಪಡಬೇಕು? I ದ್ವೇಷಿಗಳ ದಾಳಿಗೆ ನಾನೇಕೆ ಹೆದರಬೇಕು? II


ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು I ಈಕ್ಷಿಸಿದೆ ನೀ ಭಕ್ತನ ದೀನತೆಯನು, ಲಕ್ಷಿಸಿದೆ ಬಾಧೆಗಳನು II


ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.


ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.


ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಅಂಥವನ ಕಂಡು ಪ್ರಭು ನಸುನಗುತಿಹನು I ಅವನಿಗೊದಗಲಿಹ ಗತಿಯನು ಕಾಣುತಿಹನು II


ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ನಿನ್ನ ಕೋಟೆಯ ಬಾಗಿಲು ಕಬ್ಬಿಣದವು ಅವುಗಳ ಅಗುಳಿಗಳು ಕಂಚಿನವು ನೀನಿರುವಷ್ಟು ಕಾಲ ನಿನಗಿರುವುದು ಬಲವು.”


ಸತ್ಯವಂತರು ನಾಡಿನಲ್ಲಿ ಬಾಳುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು