Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:22 - ಕನ್ನಡ ಸತ್ಯವೇದವು C.L. Bible (BSI)

22 ಪ್ರಭುವಿನಿಂದ ಆಶೀರ್ವದಿತರು ನಾಡಿಗೆ ಬಾಧ್ಯಸ್ಥರು I ಆತನಿಂದ ಶಾಪಗ್ರಸ್ಥರು ಬಹಿಷ್ಕೃತರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನ ಆಶೀರ್ವಾದವು ಯಾರಿಗಿರುವದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವದೋ ಅವರು ತೆಗೆದುಹಾಕಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಆಶೀರ್ವದಿಸುವವರು, ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವರು; ಆದರೆ ದೇವರ ಶಾಪಕ್ಕೆ ಗುರಿಯಾಗುವವರು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:22
18 ತಿಳಿವುಗಳ ಹೋಲಿಕೆ  

ದುರುಳರ ಮನೆಯನ್ನು ಸರ್ವೇಶ್ವರ ಶಪಿಸುವನು; ನೀತಿವಂತರ ನಿವಾಸವನ್ನು ಆತ ಆಶೀರ್ವದಿಸುವನು.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II


ಶಾಪಗ್ರಸ್ತರು ನಿನ್ನ ಆಜ್ಞೆಗಳನು ಮೀರಿದವರು I ನಿನ್ನ ಧಿಕ್ಕಾರಕ್ಕೆ ಗುರಿಯಾಗುವರು ಆ ಗರ್ವಿಷ್ಠರು II


ಇಹಪರಗಳನು ಉಂಟುಮಾಡಿದ ಪ್ರಭುವಿಂದ I ಲಭಿಸುವಂತಾಗಲಿ ನಿಮಗೆ ಆಶೀರ್ವಾದ II


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ಸಜ್ಜನರಿಗೆ ಸಿಗುವ ಸೊತ್ತು ಶಾಶ್ವತ I ಪ್ರಭುವಿಗೆ ಗೊತ್ತು ಅವರ ಬಾಳಿನಂತ್ಯ II


ದೀನದಲಿತರು ಬಾಧ್ಯಸ್ಥರಾಗುವರು ನಾಡಿಗೆ I ಆನಂದಿಸುವರು ಅಲ್ಲಿ ದೊರಕುವ ಸುಖಶಾಂತಿಗೆ II


ಯಾರ ಪಾಪ ಪರಿಹಾರವಾಗಿದೆಯೋ I ಯಾರ ದ್ರೋಹ ವಿಮೋಚನೆಯಾಗಿದೆಯೋ - ಅವರೇ ಧನ್ಯರು II


ಮೂರ್ಖನು ಬೇರೂರುವುದನು ನೋಡಿದೆ ಕೂಡಲೆ ಅವನ ನಿವಾಸ ಶಾಪಕ್ಕೀಡಾಗುವುದನು ಕಂಡೆ.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ಬಾಳುವನಂಥವನು ಸುಖಸೌಭಾಗ್ಯದಿಂದ I ಬದುಕುವುದವನ ಸಂತತಿ ನಾಡಿನೊಡೆತನದಿಂದ II


ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು