Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:24 - ಕನ್ನಡ ಸತ್ಯವೇದವು C.L. Bible (BSI)

24 ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಕೆಳಗೆ ಬಿದ್ದರೂ ಏಳದೆ ಹೋಗುವದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವನು ಎಡವಿದರೂ ಬೀಳುವುದಿಲ್ಲ; ಯಾಕೆಂದರೆ ಯೆಹೋವನು ಅವನ ಕೈಹಿಡಿದುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಎಡವಿದರೂ ಬಿದ್ದುಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ತಾವೇ ತಮ್ಮ ಕೈಯಿಂದ ಅವನನ್ನು ಎತ್ತಿಹಿಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:24
13 ತಿಳಿವುಗಳ ಹೋಲಿಕೆ  

ನೀತಿವಂತನು ಏಳುಸಾರಿ ಬಿದ್ದರೂ ಮತ್ತೆ ಏಳುವನು; ದುಷ್ಟನು ಕೇಡುಬಂದಾಗಲೆ ಕುಸಿದು ಬೀಳುವನು.


ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು I ನಡೆಯಲಿ ಆತನು ಸದಾ ಪ್ರೀತಿಮಯನು II


ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ I ನಿನ್ನ ಅಚಲ ಪ್ರೀತಿ, ಪ್ರಭು ನೆರವಾಯಿತೆನಗೆ II


ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ಬತ್ತಿಹೋಗುವುದು ದುರ್ಜನರ ಭುಜಬಲ I ಸತ್ಯವಂತರಿಗೆ ಪ್ರಭುವೇ ಉನ್ನತಬಲ II


ಆಧಾರವಾಗಿಹನು ಪ್ರಭು ದೀನರಿಗೆ I ತುಳಿದುಬಿಡುವನು ದುರ್ಜನರನು ನೆಲಕೆ II


ನಿನ್ನ ಕಾಲು ಕಲ್ಲಿಗೆ ತಾಗದಂತೆ I ನಿನ್ನನೆತ್ತಿಕೊಳ್ವರವರು ಕೈಗಳಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು