Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:28 - ಕನ್ನಡ ಸತ್ಯವೇದವು C.L. Bible (BSI)

28 ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾಗಲೂ ಕಾಪಾಡುವನು. ದುಷ್ಟರನ್ನಾದರೋ ಆತನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:28
24 ತಿಳಿವುಗಳ ಹೋಲಿಕೆ  

ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II


ದುರುಳರಾದರೋ ನಾಡಿನಿಂದ ಬೇರ್ಪಡುವರು, ದ್ರೋಹಿಗಳು ಅಲ್ಲಿಂದ ಅಳಿದು ನಾಶವಾಗುವರು.


ನಿರ್ಮೂಲಮಾಡುವೆ ನೀನವರ ಸಂತಾನವನು ಧರೆಯಿಂದ I ಕುಡಿಯಿಲ್ಲದಾಗಿಸುವೆ ಅವರನು ಮಾನವರ ಮಧ್ಯದಿಂದ II


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಅವನಿಗೆ ಮಕ್ಕಳು ಹೆಚ್ಚಿದರೂ ಕತ್ತಿಗೆ ತುತ್ತಾಗುವರು ಅವನ ಸಂತತಿಯವರಿಗೆ ಊಟದ ಕೊರತೆ ತಪ್ಪದು.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ತನ್ನಾಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು I ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು II


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಸಜ್ಜನ ದಿಕ್ಕಿಲ್ಲದಿರುವುದನು, ಅವನ ಸಂತತಿ ಭಿಕ್ಷೆ ಬೇಡುವುದನು I ನಾ ಕಾಣೆನು, ವೃದ್ಧ ನಾನೆಂದೂ ಕಾಣೆನು, ಬಾಲ್ಯದಿಂದ ಕಾಣೆನು II


ಅವನ ಮಗ, ಮೊಮ್ಮಗರಾರೂ ಇರರು ಸ್ವಜನರಲಿ ಯಾರೂ ಉಳಿಯರು ಅವನು ವಾಸಿಸಿದ ಸ್ಥಳದಲಿ.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು