Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:3 - ಕನ್ನಡ ಸತ್ಯವೇದವು C.L. Bible (BSI)

3 ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:3
20 ತಿಳಿವುಗಳ ಹೋಲಿಕೆ  

ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.


ಅರ್ಪಿಸಿರಿ ಯೋಗ್ಯ ಬಲಿಗಳನೆ I ಇಡಿರಿ ಭರವಸೆ ಪ್ರಭುವಿನಲೆ II


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ತಪ್ಪಿಸುವನವನು ಪ್ರಾಣವನು ಮರಣದಿಂದ I ಉಳಿಸುವನು ಜೀವವನು ಕ್ಷಾಮಡಾಮರದಿಂದ II


ಅಲ್ಲಿ ಸರ್ವೇಶ್ವರ ಸ್ವಾಮಿ ಇಸಾಕನಿಗೆ ದರ್ಶನ ಕೊಟ್ಟು ಇಂತೆಂದರು: “ನೀನು ಈಜಿಪ್ಟಿಗೆ ಹೋಗಬೇಡ;


ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಎಲೀಯನು ಎದ್ದು ಸುತ್ತಲೂ ನೋಡಿದನು. ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇದ್ದುವು. ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ಪುನಃ ಮಲಗಿದನು.


ನಿನ್ನ ಸ್ವಂತ ಬುದ್ಧಿಯನ್ನೇ ನೆಚ್ಚಿಕೊಂಡಿರದಿರು; ಪೂರ್ಣ ಮನಸ್ಸಿನಿಂದ ಸರ್ವೇಶ್ವರನಲ್ಲಿ ನಂಬಿಕೆಯಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು