Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:35 - ಕನ್ನಡ ಸತ್ಯವೇದವು C.L. Bible (BSI)

35 ದುರುಳನೋರ್ವ ಮಹಾಗರ್ವದಿಂದ ಬಾಳುತ್ತಿದ್ದ I ಹುಲುಸಾಗಿ ಬೆಳೆದ ದೇವದಾರು ಮರದಂತಿದ್ದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸುರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವದನ್ನು ನೋಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮಹಾದುಷ್ಟನನ್ನು ನಾನು ನೋಡಿದ್ದೇನೆ. ಅವನು ಮಹಾವೃಕ್ಷದಂತೆ ಬಲಿಷ್ಠನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದುಷ್ಟರು ದೊಡ್ಡ ಅಧಿಕಾರದಲ್ಲಿರುವುದನ್ನು ನಾನು ಕಂಡೆನು; ಅವರು ಹಸಿರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:35
16 ತಿಳಿವುಗಳ ಹೋಲಿಕೆ  

ಮೂರ್ಖನು ಬೇರೂರುವುದನು ನೋಡಿದೆ ಕೂಡಲೆ ಅವನ ನಿವಾಸ ಶಾಪಕ್ಕೀಡಾಗುವುದನು ಕಂಡೆ.


ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”


ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.


ಆಗ ಯೋವಾಬನು, “ಇಲ್ಲಿ ನಿಂತು ನಿನ್ನೊಡನೆ ಸಮಯ ಕಳೆಯಲಾರೆ,” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು.


ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ ಯೋವಾಬನ ಆಯುಧಗಳನ್ನು ಹೊರುವ ಹತ್ತುಮಂದಿ ಯುವಕರು ಬಂದು ಅವನನ್ನು ಕೊಂದುಹಾಕಿದರು.


ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.


ಇಂತಿರಲು ವನವೃಕ್ಷಗಳಲೆಲ್ಲ ಆ ವೃಕ್ಷ ಅತ್ಯುನ್ನತವಾಗಿತ್ತು ಅದರ ರೆಂಬೆಗಳು ನಿಬಿಡವಾಗಿದ್ದವು, ಉದ್ದುದ್ದ ಚಾಚಿಕೊಂಡಿದ್ದವು.


ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.


ಬಳಿಕ ರಾಜನು ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗುವನು. ಆದರೆ ಎಡವಿಬಿದ್ದು ಅಳಿದುಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು