Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:5 - ಕನ್ನಡ ಸತ್ಯವೇದವು C.L. Bible (BSI)

5 ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನನ್ನು ಆಶ್ರಯಿಸಿಕೊ, ಆತನಲ್ಲಿ ಭರವಸವಿಡು. ನಿನಗೆ ಅಗತ್ಯವಾದದ್ದನ್ನು ಆತನೇ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನ ಮಾರ್ಗವನ್ನು ಯೆಹೋವ ದೇವರಿಗೆ ಒಪ್ಪಿಸು; ಅವರಲ್ಲಿ ಭರವಸೆ ಇಡು; ಅವರು ನಿನಗೆ ಇದನ್ನು ಮಾಡುವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:5
14 ತಿಳಿವುಗಳ ಹೋಲಿಕೆ  

ನಿನ್ನ ಕಾರ್ಯಭಾರವನ್ನು ಸರ್ವೇಶ್ವರನಿಗೆ ವಹಿಸು; ಆಗ ಸಫಲವಾಗುವುದು ನಿನ್ನ ಯೋಜನೆಯು.


ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.


“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?


ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II


ಆದ್ದರಿಂದ ನೀವು ಅಂಥ ಮಾತನ್ನು ಬಿಟ್ಟು, “ಪ್ರಭುವಿನ ಚಿತ್ತವಿದ್ದರೆ ನಾವು ಬದುಕಿರುತ್ತೇವೆ, ಇಂಥಿಂಥದ್ದನ್ನು ಮಾಡುತ್ತೇವೆ,” ಎಂದು ನೀವು ಹೇಳುವುದೇ ಸರಿ.


“ಇತ್ತನಿವನು ಭರವಸೆ, ಪ್ರಭುವೆ ತನ್ನುದ್ಧಾರಕನೆಂದು I ಆತನಿಗಿವನು ಮೆಚ್ಚುಗೆಯಾದರೆ ರಕ್ಷಿಸಲಿ” - ಇಂತೆಂದು II


ನಿನ್ನ ಯೋಜನೆಗಳು ಸಫಲವಾಗುವುವು ನಿನ್ನ ಮಾರ್ಗಗಳು ಪ್ರಜ್ವಲಿಸುವುವು.


ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.


ಅವರು, “ಇಲ್ಲ, ನೀವು ನಮ್ಮನ್ನು ವಂಚಿಸಿ ಪೀಡಿಸಿ ನಮ್ಮಿಂದ ಏನೂ ಕಸಿದುಕೊಂಡಿಲ್ಲ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು