Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:6 - ಕನ್ನಡ ಸತ್ಯವೇದವು C.L. Bible (BSI)

6 ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನ್ನ ನೀತಿಯೂ ನ್ಯಾಯವೂ ಮಧಾಹ್ನದ ಸೂರ್ಯನಂತೆ ಪ್ರಕಾಶಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು, ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:6
10 ತಿಳಿವುಗಳ ಹೋಲಿಕೆ  

ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಆಗ ನಿನ್ನ ಬಾಳು ನಡುಹಗಲಿಗಿಂತ ಪ್ರಜ್ವಲ ಕತ್ತಲು ಕೂಡ ಪ್ರಾತಃಕಾಲದಂತೆ ಉಜ್ವಲ!


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!


ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.


ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


‘ಸರ್ವೇಶ್ವರ ನಮ್ಮ ಧಾರ್ಮಿಕತೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ನಡೆಸಿದ ಮಹತ್ಕಾರ್ಯವನ್ನು ಸಿಯೋನಿನಲ್ಲಿ ಪ್ರಕಟಿಸೋಣ ಬನ್ನಿ’ ಎಂದು ಹೇಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು