Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:8 - ಕನ್ನಡ ಸತ್ಯವೇದವು C.L. Bible (BSI)

8 ಅಡಗಿಸು ಕೋಪವನು; ವರ್ಜಿಸು ಕ್ರೋಧವನು I ಕಿಡಿಕಿಡಿಯಾಗಬೇಡ, ತರುವುದದು ಕೇಡನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೋಪವನ್ನು ಅಣಗಿಸಿಕೋ; ರೋಷವನ್ನು ಬಿಡು. ಉರಿಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೋಪದಿಂದಿರಬೇಡ! ರೋಷದಿಂದಿರಬೇಡ! ಉರಿಗೊಳ್ಳಬೇಡ! ಅವು ನಿನ್ನನ್ನು ಕೆಡುಕಿಗೆ ನಡೆಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೋಪವನ್ನು ಅಡಗಿಸು ಮತ್ತು ರೋಷವನ್ನು ಬಿಡು. ಸಿಡುಕಬೇಡ, ಅದು ಕೆಟ್ಟತನಕ್ಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:8
18 ತಿಳಿವುಗಳ ಹೋಲಿಕೆ  

ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು.


ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.


ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ.


ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.


ಈಗಲಾದರೋ ಕೋಪ, ರೋಷ, ಮತ್ಸರ - ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು.


ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


ಸರ್ವೇಶ್ವರಸ್ವಾಮಿಯ ವರ್ತನೆಯು ಯೋನನಿಗೆ ಹಿಡಿಸಲಿಲ್ಲ. ಅವನ ಕೋಪ ನೆತ್ತಿಗೇರಿತು.


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ಸಿಟ್ಟಿನಿಂದ ನಿನ್ನನ್ನೆ ಸೀಳಿಕೊಳ್ಳುತ್ತಿರುವವನೇ, ನಿನ್ನ ನಿಮಿತ್ತ ಇಡೀಲೋಕ ಬಿಕೋ ಎನ್ನಬೇಕೆ? ಬೆಟ್ಟಗುಡ್ಡಗಳು ಸ್ಥಳಬಿಟ್ಟು ಜರುಗಬೇಕೆ?


ನಾ ಬಾಯ್ದೆರೆದು ನುಡಿದಿದ್ದೆನಾದರೆ ಈ ಪರಿ I ನಿನ್ನ ಭಕ್ತಕುಲಕೆ ನಾ ದ್ರೋಹಿಯೇ ಸರಿ II


ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II


ಫರೋಹನು, “ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಏಕೆ ಆಶಿಸುತ್ತಿ?” ಎಂದು ಕೇಳಿದನು. ಅವನು, “ಏನೂ ಕೊರತೆಯಾಗಿಲ್ಲ; ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಉತ್ತರಕೊಟ್ಟನು. ಹದದನು ತನ್ನ ಊರಿಗೆ ಮರಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು