Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:10 - ಕನ್ನಡ ಸತ್ಯವೇದವು C.L. Bible (BSI)

10 ಬಡಿದುಕೊಳ್ಳುತಿದೆ ಹೃದಯ, ಹುದುಗಿಹೋಗಿದೆ ಚೇತನ I ಮಬ್ಬಾಗಿ ಹೋಗಿದೆ ನನ್ನೆರಡು ನಯನಸಾಧನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಗುಂಡಿಗೆ ಬಡುಕೊಳ್ಳುತ್ತದೆ; ನನ್ನ ಚೈತನ್ಯವು ಕುಗ್ಗಿಹೋಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ; ನನ್ನ ದೃಷ್ಟಿಯು ಹಿಂಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಹೃದಯ ಬಡಿದುಕೊಳ್ಳುತ್ತದೆ. ನನ್ನ ಶಕ್ತಿಯು ನನ್ನನ್ನು ಬಿಟ್ಟುಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ಹೋಗಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:10
12 ತಿಳಿವುಗಳ ಹೋಲಿಕೆ  

ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II


ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?


ಮಂದವಾಯಿತೆನ್ನ ನೇತ್ರ ನಿನ್ನ ರಕ್ಷಣೆಗಾಗಿ ಕಾಯುತ I ನೀತಿಯುತ ನಿನ್ನ ನುಡಿ ಈಡೇರುವುದನು ನಿರೀಕ್ಷಿಸುತ II


ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II


ಕರಗುತ್ತಿದೆ ಬದುಕು ತಾಪದಲಿ; ಕುಂದುತ್ತಿದೆ ಶಕ್ತಿ ಪಾಪದಲಿ I ಸವೆದು ಹೋಗುತ್ತಿವೆ ನನ್ನ ದೇಹದೆಲುಬುಗಳು ಕಾಲ ಚಕ್ರದಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು