Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:12 - ಕನ್ನಡ ಸತ್ಯವೇದವು C.L. Bible (BSI)

12 ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಪ್ರಾಣವನ್ನು ತೆಗೆಯಬೇಕೆಂಬವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಆಲೋಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:12
18 ತಿಳಿವುಗಳ ಹೋಲಿಕೆ  

ಸಮಾಧಾನಕರವಲ್ಲ ಅವರಾಡುವ ನುಡಿಗಳು I ಮುಗ್ಧನಾಡಿಗರನು ಮೋಸಗೊಳಿಸುವಾ ಮಾತುಗಳು II


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ಕಾಪಾಡು ಕೆಡುಕರೊಡ್ಡಿದ ಉರುಲಿನಿಂದ I ತಪ್ಪಿಸೆನ್ನನು ಅವರಿಟ್ಟ ಬೋನಿನಿಂದ II


ನನ್ನ ಕೊಲೆಗೆ ಯತ್ನಿಸುವವನು ತಲೆ ತಗ್ಗಿಸಲಿ ನಿರಾಶೆಗೊಂಡು I ನನಗೆ ಕೇಡನು ಮಾಡುವವರು ಓಡಿಹೋಗಲಿ ಗಲಿಬಿಲಿಗೊಂಡು II


ಒಡ್ಡಿಹರು ಎನಗೆ ಆ ದುರುಳ ಜನರು ಬಲೆಯನು I ಆದರೂ ಮೀರಿಲ್ಲ ನಾನು ನಿನ್ನ ನಿಯಮಗಳನು II


ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II


ಹೊಂಚುಹಾಕುವನವನು ಗುಹೆಯೊಳಗಿನ ಸಿಂಹದಂತೆ I ಕಾಯ್ದು ಹಿಡಿದೆಳೆವನು ದಲಿತರನು ಬಲೆಗೆ ಬೀಳ್ವಂತೆ II


ಸೋದರನನ್ನೂ ನನ್ನಿಂದ ದೇವರು ದೂರವಾಗಿರಿಸಿದ್ದಾನೆ ಪರಿಚಿತರೆಲ್ಲರು ನನ್ನನು ತೊರೆದುಬಿಟ್ಟಿದ್ದಾರೆ.


ನುಚ್ಚುನೂರಾದೆ, ಮಡಕೆಚಿಪ್ಪಿನಂತಾದೆ I ಸತ್ತವರಂತಾದೆ: ನೆನಪಿಗೆ ಬಾರದಾದೆ II


“ಇವನ ಸಾವೆಂದು? ಇವ ನಿರ್ನಾಮವಾಗುವದೆಂತು?” I ನನಗೆ ಕೇಡು ಬಯಸುವವರ ಕುಹಕ ನುಡಿಯಿದು II


ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II


ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II


ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು