Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:20 - ಕನ್ನಡ ಸತ್ಯವೇದವು C.L. Bible (BSI)

20 ಎಸಗಿಹರು ಉಪಕಾರಕೆ ಪ್ರತಿಯಾಗಿ ಅಪಕಾರ I ಎದುರಿಸುತಿಹರೀಗ ನಾ ಹಿಡಿದಿರುವ ಸನ್ಮಾರ್ಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಉಪಕಾರಕ್ಕೆ ಪ್ರತಿಯಾಗಿ ಅಪಕಾರ ಸಲ್ಲಿಸುವವರು ಒಳ್ಳೆಯದನ್ನು ಅನುಸರಿಸುವ ನನ್ನನ್ನು ಎದುರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಉಪಕಾರವನ್ನು ಮಾಡಿದ್ದರೂ ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು. ನಾನು ಒಳ್ಳೆಯದನ್ನು ಮಾಡಬೇಕೆಂದರೂ ಅವರು ನನ್ನನ್ನು ವಿರೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಶತ್ರುಗಳು ಒಳ್ಳೆಯದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುತ್ತಿದ್ದಾರೆ. ನಾನು ಒಳ್ಳೆಯದನ್ನು ಹಿಂದಟ್ಟುವ ಕಾರಣ ನನ್ನನ್ನು ಎದುರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:20
18 ತಿಳಿವುಗಳ ಹೋಲಿಕೆ  

ಎಸಗುತಿಹರು ಉಪಕಾರಕೆ ಅಪಕಾರ I ಮಾಡಿಹರೆನ್ನನು ನಿರ್ಗತಿಕ ಪಿಂಜಾರ II


ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ನೀವು ಒಳ್ಳೆಯದನ್ನು ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಬಗೆಯುವವರು ಯಾರು?


ಅದಕ್ಕೆ ಯೇಸು, “ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮುಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದರು.


ಅಷ್ಟರಲ್ಲಿ ದಾವೀದನು, “ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥ ಆಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.


ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನಿದ್ದಾಗ ಅವರು ಹಗಲೂ ಇರುಳೂ ನಮಗೆ ಕಾವಲುಗೋಡೆಯಂತಿದ್ದರು.


ದಾವೀದನು ಪುನಃ ಸರ್ವೇಶ್ವರನನ್ನು, ಕೆಯೀಲಾದವರು ನನ್ನನ್ನೂ ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೇ?” ಎಂದು ಕೇಳಿದಾಗ ಅವರು, “ಒಪ್ಪಿಸಿಕೊಡುವರು,” ಎಂದು ಉತ್ತರಕೊಟ್ಟರು.


ಆಗ ದಾವೀದನು ತನ್ನ ಜನರೊಡನೆ ಕೆಯೀಲಾಕ್ಕೆ ಹೋಗಿ ಫಿಲಿಷ್ಟಿಯರೊಡನೆ ಯುದ್ಧಮಾಡಿದನು. ಅವರನ್ನು ಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲಾದವರನ್ನು ಕಾಪಾಡಿದನು.


ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.”


ಶತ್ರುಗಳಿಹರು ನೋಡು ಸಹಸ್ರಾರು I ಕ್ರೋಧದಿಂದೆನ್ನ ಹಗೆ ಮಾಡುತಿಹರು II


ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II


ಬಿಡಿಸು ಸೆರೆಯಿಂದೆನ್ನನು, ಭಜಿಸುವೆನು ನಿನ್ನ ನಾಮವನು I ಸಜ್ಜನರ ಸಭೆಯಲಿ ಕೊಂಡಾಡುವೆನು ನಿನ್ನ ಉಪಕಾರವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು