Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:6 - ಕನ್ನಡ ಸತ್ಯವೇದವು C.L. Bible (BSI)

6 ಬಾಗಿ ಕುಗ್ಗಿಹೋಗಿರುವೆ ಪ್ರಭು ಬಹಳವಾಗಿ I ದಿನವೆಲ್ಲ ಅಲೆಯುತ್ತಿರುವೆ ದುಃಖಭರಿತನಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಬಾಗಿ ಕುಗ್ಗಿಹೋಗಿದ್ದೇನೆ. ನಾನು ದಿನವೆಲ್ಲಾ ನಿರುತ್ಸಾಹನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ. ದಿನವೆಲ್ಲಾ ದುಃಖದಿಂದ ನಾನು ಅಲೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:6
13 ತಿಳಿವುಗಳ ಹೋಲಿಕೆ  

ಸಂತೈಸುವ ಸೂರ್ಯನಿಲ್ಲದೆ ಅಲೆಯುತ್ತಿರುವೆ ಮಂಕು ಕವಿದು ಅಂಗಲಾಚುತ್ತಿರುವೆ ಸಭೆಯ ಮಧ್ಯೆ ನಿಂತು.


ಶೋಕತಪ್ತನಾದೆ ಗೆಳೆಯನಿಗೊ ಬಳಗದವನಿಗೊ ಎಂಬಂತೆ I ಅತ್ತು ಪ್ರಲಾಪಿಸಿದೆ ತಾಯನು ಕಳೆದುಕೊಂಡ ತಬ್ಬಲಿಯಂತೆ II


ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II


ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ? I ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ? II


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು I ನಡೆಯಲಿ ಆತನು ಸದಾ ಪ್ರೀತಿಮಯನು II


ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II


ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II


ಕರಗುತ್ತಿದೆ ಬದುಕು ತಾಪದಲಿ; ಕುಂದುತ್ತಿದೆ ಶಕ್ತಿ ಪಾಪದಲಿ I ಸವೆದು ಹೋಗುತ್ತಿವೆ ನನ್ನ ದೇಹದೆಲುಬುಗಳು ಕಾಲ ಚಕ್ರದಲಿ II


ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II


ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.


ನನ್ನ ಮಾಂಸ ಮುಸುಕಿದೆ ಹುಳುಹುಪ್ಪಟೆಗಳಿಂದ ನನ್ನ ಚರ್ಮ ಬಿರಿದಿದೆ ಕಜ್ಜಿಕಡಿತಗಳಿಂದ.


ರೋಗಿಗಳಾದರವರು ಅನಾಚಾರದ ನಿಮಿತ್ತ I ಬಾಧೆಗೊಳಗಾದರವರು ಪಾಪಕಾರ್ಯಗಳ ನಿಮಿತ್ತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು