Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 39:1 - ಕನ್ನಡ ಸತ್ಯವೇದವು C.L. Bible (BSI)

1 ನಾ ಇಂತೆಂದುಕೊಂಡೆ : “ಜಾಗರೂಕನಾಗಿರುವೆ ಜಿಹ್ವೆ ಪಾಪಕ್ಕೆಳೆಯದಂತೆ I ಬಾಯಿಗೆ ಕುಕ್ಕೆ ಹಾಕಿಕೊಂಡಿರುವೆ ದುರ್ಜನರ ಮುಂದೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು; ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕುಕ್ಕೆಹಾಕಿಕೊಂಡಿರುವೆನು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಾನು ಜಾಗರೂಕನಾಗಿ ಮಾತಾಡುವೆ. ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ. ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ” ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನನ್ನ ನಾಲಿಗೆಯಿಂದ ಪಾಪಮಾಡದಂತೆ ಜಾಗರೂಕನಾಗಿರುವೆನು, ನನ್ನ ಮಾರ್ಗಗಳನ್ನು ಕಾಪಾಡಿಕೊಳ್ಳುವೆನು. ದುಷ್ಟರು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಹಾಕಿಕೊಳ್ಳುವೆನು,” ಎಂದು ತೀರ್ಮಾನಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 39:1
21 ತಿಳಿವುಗಳ ಹೋಲಿಕೆ  

ಬಾಯನ್ನೂ ನಾಲಿಗೆಯನ್ನೂ ಕಾಯಬಲ್ಲವನು ಜಯಿಸುವನು ತೊಂದರೆ ತಾಪತ್ರಯಗಳನ್ನು.


ಕಾವಲಿರಿಸು ಪ್ರಭು ನನ್ನ ಬಾಯಿಗೆ I ಪಹರೆಯಿರಲಿ ನನ್ನ ತುಟಿ ಕದಗಳಿಗೆ II


ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.


ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II


ಕಾದಿಡು ನಾಲಿಗೆಯನು ಕೇಡನು ಆಡದಂತೆ I ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.


ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


“ನಮ್ಮ ತುಟಿಗೆ ಹತೋಟಿ ಬೇಕಿಲ್ಲ; ನಾಲಗೆಯೇ ಗೆಲುವಿನ ಮೂಲ I ನಮಗೊಡೆಯನ ಅವಶ್ಯವಿಲ್ಲ” ಎಂದವರಾಡುವುದು ಸಲ್ಲ II


ಎನ್ನ ಮನಕ್ಕೆ ಶಾಂತಿ ದೇವನಿಂದಲೆ I ನನ್ನ ಜೀವೋದ್ಧಾರ ಆತನಿಂದಲೆ II


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ಮೊರೆಯಿಡುವೆನು, ಕೂಗಿ ಮೊರೆಯಿಡುವೆನು I ಸ್ವಾಮಿ ದೇವನು ನನಗೆ ಕಿವಿಗೊಡುವನು II


ಆದರೆ ಅವನು ಇಸ್ರಯೇಲ್ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.


ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.


ಅಲ್ಲಿ ಅವರೊಂದಿಗೆ ಸರ್ವೇಶ್ವರನ ನಿತ್ಯಪ್ರೀತಿಗಾಗಿ ಅವರನ್ನು ಸ್ತುತಿಸಿ, ಸಂಗೀತ ಹಾಡಲು ಹೇಮಾನ್, ಯೆದುತೂನ ಹಾಗು ಇನ್ನಿತರರು ನಿರ್ದಿಷ್ಟವಾಗಿ ನೇಮಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು