Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:1 - ಕನ್ನಡ ಸತ್ಯವೇದವು C.L. Bible (BSI)

1 ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಇಕ್ಕಟ್ಟಿನಿಂದ ಬಿಡಿಸಿ ಇಂಬಾದ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಅಂಗೀಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:1
35 ತಿಳಿವುಗಳ ಹೋಲಿಕೆ  

ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.


ನಿನ್ನ ನಾಮಪ್ರಿಯರಿಗೆ ಮಾಡುವಂತೆ I ನನಗಭಿಮುಖನಾಗಿ ತೋರು ನೀ ಮಮತೆ II


ಒಬ್ಬೊಂಟಿಗನಾದೆ, ಸಿಕ್ಕಿಕೊಂಡೆ ಸಂಕಟಕೆ I ಕಟಾಕ್ಷಿಸೋ ಪ್ರಭು, ಕರುಣೆತೋರೋ ತಬ್ಬಲಿಗೆ II


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಸದುತ್ತರ ಪಾಲಿಪೆಯೆಂದು ನಂಬಿ ಬೇಡುವೆನಯ್ಯಾ I ಮೊರೆಯಿಡುವೆ ದೇವಾ, ಕಿವಿಗೊಟ್ಟು ಆಲಿಸಯ್ಯಾ II


ಸ್ವಾಮಿ ಸರ್ವೇಶ್ವರ ನೀಡುವನೆನಗೆ ಧೀರತೆ ಚುರುಕುಗೊಳಿಸುವನಾತ ನನ್ನ ಕಾಲುಗಳನು ಜಿಂಕೆಯಂತೆ ಮಾಡುವನು ಬೆಟ್ಟಗುಡ್ಡಗಳಲಿ ನಾನು ಓಡಾಡುವಂತೆ.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II


ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು.


ಸಹೋದರರೇ, ಏಷ್ಯಾ ಪ್ರಾಂತ್ಯದಲ್ಲಿ ನಮಗೊದಗಿದ ಹಿಂಸೆಬಾಧೆಗಳು ನಿಮಗೆ ತಿಳಿದಿವೆಯಷ್ಟೆ. ಅಲ್ಲಿ ಸಹಿಸಲಸಾಧ್ಯವಾದಷ್ಟು ಸಂಕಟವನ್ನು ಅನುಭವಿಸಬೇಕಾಯಿತು. ನಾವು ಬದುಕುವ ಆಶೆಯನ್ನೇ ಬಿಡಬೇಕಾಯಿತು.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಸುಪ್ರಸಿದ್ಧನು ದೇವನು ಜುದೇಯನಾಡಿನಲಿ I ಸುಪ್ರಖ್ಯಾತ ಆತನ ನಾಮ ಇಸ್ರಯೇಲಿನಲಿ II


ಹರಸು ದೇವಾ, ನಮ್ಮನಾಶೀರ್ವದಿಸು I ನಿನ್ನ ಮುಖಕಾಂತಿಯಿಂದೆಮ್ಮನು ಬೆಳಗಿಸು II


ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II


ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II


ಲಭಿಸುವುದಾತನಿಗೆ ಶುಭ ಪ್ರಭುವಿನಿಂದ I ನೀತಿಯ ಸತ್ಫಲ ರಕ್ಷಕ ದೇವನಿಂದ II


ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II


ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II


ಕಾಪಾಡುವನು ಪ್ರಭು ಸರಳ ಜೀವಿಗಳನು I ರಕ್ಷಿಸಿದನು ಕುಗ್ಗಿದವನಾಗಿದ್ದ ಎನ್ನನು II


ಕರುಣೆತೋರು ದೇವಾ, ಜನರೆನ್ನ ಬೆನ್ನಟ್ಟಿ ಬರುತಿಹರು I ದಿನವೆಲ್ಲ ಕದನ ಮಾಡಿ ಶತ್ರುಗಳೆನ್ನ ಬಾಧಿಸುತಿಹರು II


ನಿರ್ದೋಷಿಯಾದೆನ್ನನು ನೀನುದ್ಧರಿಸುವೆ I ಚಿರಕಾಲ ನಿನ್ನ ಸನ್ನಿಧಿಯಲ್ಲೆನ್ನನು ಇರಿಸುವೆ II


ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II


ಅಂತೆಯೆ, ಕಷ್ಟದಿಂದ ನಿನ್ನನ್ನು ತಪ್ಪಿಸಬೇಕೆಂಬುದು ಇಕ್ಕಟ್ಟಿಲ್ಲದ ಬಯಲಿಗೆ ನಿನ್ನನ್ನು ತರಬೇಕೆಂಬುದು ನಿನ್ನ ಊಟದ ಮೇಜು ಸಮೃದ್ಧಿಯಾಗಿರಬೇಕೆಂಬುದು ದೇವರ ಉದ್ದೇಶವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು