Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:3 - ಕನ್ನಡ ಸತ್ಯವೇದವು C.L. Bible (BSI)

3 ಭಕ್ತನನು ಪ್ರಭು ಪ್ರತ್ಯೇಕಿಸಿಕೊಂಡನೆಂದು ತಿಳಿದುಕೊ I ನಾ ಮೊರೆಯಿಟ್ಟಾಗ ಆತ ಕಿವಿಗೊಡುವನೆಂದು ಅರಿತುಕೊ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ. ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ತಮ್ಮ ನಂಬಿಗಸ್ತರನ್ನು ತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ; ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:3
17 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.


ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


“ಬಲಿ ಮೂಲಕ ಒಡಂಬಡಿಕೆ ಗೈದ ಭಕ್ತರನು I ಸಭೆ ಸೇರಿಸಿ ಇಲ್ಲೆನ್ನ ಮುಂದೆ,” ಎನ್ನುತಿಹನು II


ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II


ನಾ ಮೊರೆಯಿಟ್ಟಾಗ ಶತ್ರುಗಳು ಪರಾರಿ ಹಿಂದಕೆ I ದೇವನಿರುವುದು ನನ್ನ ಕಡೆ, ಇದು ಗೊತ್ತಿದೆ ನನಗೆ II


ನನ್ನ ಬಾಯಿ ಬೋಧಿಸುವುದು ಸುಜ್ಞಾನವನು I ನನ್ನ ಮನ ಧ್ಯಾನಿಸುವುದು ವಿವೇಚನೆಯನು II


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು