Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:4 - ಕನ್ನಡ ಸತ್ಯವೇದವು C.L. Bible (BSI)

4 ಕೋಪಗೊಂಡರೂ ದೂರವಿರು ಪಾಪದಿಂದ I ಶಯನದಲ್ಲಿದ್ದರೂ ಧ್ಯಾನಿಸು ಹೃದಯದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಭಯಪಡಿರಿ, ಪಾಪಮಾಡಬೇಡಿರಿ, ಮೌನವಾಗಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಡುಗಿರಿ, ಪಾಪಮಾಡಬೇಡಿರಿ; ನೀವು ನಿಮ್ಮ ಹಾಸಿಗೆಯ ಮೇಲೆ ಇರುವಾಗ, ನಿಮ್ಮ ಹೃದಯಗಳಲ್ಲಿ ಧ್ಯಾನಮಾಡಿ ಮೌನವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:4
17 ತಿಳಿವುಗಳ ಹೋಲಿಕೆ  

ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.


ನಿನ್ನ ಧ್ಯಾನ ಬರುತ್ತದೆ ನೆನಪಿಗೆ ರಾತ್ರಿಯೊಳು I ಆಲೋಚನೆ ಸುಳಿಯುತ್ತದೆ ನನ್ನಾಂತರ್ಯದೊಳು I ಈ ತೆರನ ಪ್ರಶ್ನೆಯೇಳುತ್ತದೆನ್ನ ಮನದೊಳು : II


ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ನಿದ್ರಿಸುವಾಗಲು ಮಾಡುವೆ ನಿನ್ನ ಸ್ಮರಣೆ I ರಾತ್ರಿಯೆಲ್ಲ ನಿನ್ನ ಧ್ಯಾನವೆ ನನಗೆ ಜಾಗರಣೆ II


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ಪೊಡವಿಯೆಲ್ಲವು ಭಯಪಡಲಿ ಪ್ರಭುವಿಗೆ I ಅಡಗಿ ನಡೆಯಲಿ ನಾಡಿಗರೆಲ್ಲ ಆತನಿಗೆ II


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ಸಜ್ಜನರ ರಾಜಮಾರ್ಗ ಹಾನಿಗೆ ದೂರ; ಸನ್ನಡತೆಯುಳ್ಳವ ಪ್ರಾಣಸಂರಕ್ಷಕ.


ಪೀಡಿಸುತಿಹರು ನಿಷ್ಕಾರಣವಾಗಿ ರಾಜರುಗಳು I ನಿನ್ನ ವಾಕ್ಯದ ಭೀತಿ ಇಹುದು ನನ್ನ ಹೃದಯದೊಳು II


ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II


“ಭಯಭಕುತಿಯಿಂದ ಪ್ರಭುವಿಗೆ ಸೇವೆಮಾಡಿರಿ I ನಡುನಡುಗುತ ಆತನ ಪಾದಪೂಜೆ ಮಾಡಿರಿ” II


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


“ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II


ಸದುತ್ತರ ಪಾಲಿಪೆಯೆಂದು ನಂಬಿ ಬೇಡುವೆನಯ್ಯಾ I ಮೊರೆಯಿಡುವೆ ದೇವಾ, ಕಿವಿಗೊಟ್ಟು ಆಲಿಸಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು