Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:6 - ಕನ್ನಡ ಸತ್ಯವೇದವು C.L. Bible (BSI)

6 “ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:6
20 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ದೇವನೆ, ಉದ್ಧರಿಸು ನಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ!


ತೋರು ನಿನ್ನ ಮುಖದರ್ಶನ ಈ ದಾಸನಿಗೆ I ನೀ ಕಲಿಸು ನಿನ್ನ ನಿಬಂಧನೆಗಳನು ಎನಗೆ II


ಸರ್ವಶಕ್ತನಾದ ದೇವನೆ, ಉದ್ಧರಿಸೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ಹರಸು ದೇವಾ, ನಮ್ಮನಾಶೀರ್ವದಿಸು I ನಿನ್ನ ಮುಖಕಾಂತಿಯಿಂದೆಮ್ಮನು ಬೆಳಗಿಸು II


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ಅಮರ ಭಾಗ್ಯಗಳನು ನೀನನುಗ್ರಹಿಸಿದೆ I ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ II


“ಇಂಥಿಂಥ ದಿನ ಇಂಥಿಂಥ ಪಟ್ಟಣಕ್ಕೆ ಹೋಗೋಣ, ಅಲ್ಲಿ ಒಂದು ವರ್ಷ ಇದ್ದು ವ್ಯಾಪಾರ ಮಾಡೋಣ; ಅತಿಯಾಗಿ ಲಾಭ ಸಂಪಾದಿಸೋಣ,” ಎಂದೆಲ್ಲಾ ಆಲೋಚಿಸುವವರೇ, ಈಗ ಕೇಳಿ: ನೀವು ಇಷ್ಟೆಲ್ಲಾ ಆಲೋಚಿಸಿದರೂ ನಾಳೆ ಏನಾಗುವುದೋ ನಿಮಗೇ ತಿಳಿಯದು.


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಇವರು ಕರೆದುತರುವರು ಅನ್ಯಜನಗಳನು ಮಲೆನಾಡಿಗೆ ಅರ್ಪಿಸತರುವರು ನ್ಯಾಯಯುತವಾದ ಬಲಿಗಳನು ಅಲ್ಲಿಗೆ. ಸವಿವರು ಕಡಲ ಸಿರಿಯನು ನೆಲದಲ್ಲಡಗಿರುವ ಸಂಪದವನು.”


ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನುಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು