Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:7 - ಕನ್ನಡ ಸತ್ಯವೇದವು C.L. Bible (BSI)

7 ಧಾನ್ಯದ್ರಾಕ್ಷಿಗಳ ಸುಗ್ಗಿಸಂತಸಕ್ಕಿಂತಲು I ಮಿಗಿಲಾನಂದ ತುಂಬಿಸಿರುವೆ ನೀ ಎನ್ನೆದೆಯೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಧಾನ್ಯದ್ರಾಕ್ಷೆಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಅವರಿಗಿರುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿ ಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದ ಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:7
14 ತಿಳಿವುಗಳ ಹೋಲಿಕೆ  

ವೃದ್ಧಿಗೊಳಿಸಿರುವೆ ನೀನು ಆ ದೇಶವನು ಅಧಿಕರಿಸಿರುವೆ ಅದರ ತೋಷವನು ಸುಗ್ಗಿಕಾಲದಲಿ ಹಿಗ್ಗುವವರಂತೆ ಕೊಳ್ಳೆ ಹಂಚಿಕೊಳ್ಳುವವರಂತೆ ಹರ್ಷಿಸುವರವರು ನಿನ್ನ ಮುಂದೆ.


ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ನಿನ್ನ ಕಾರ್ಯಗಳಿಂದ ಪ್ರಭು, ನನ್ನನ್ನು ಆನಂದಗೊಳಿಸಿರುವೆ I ನಿನ್ನಾ ಕಾರ್ಯಗಳ ನೋಡಿ, ನಾನು ಉಲ್ಲಾಸದಿಂದ ಹಾಡುವೆ II


ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ನಾಡಿನಿಂದಲೂ ತೊಲಗಿವೆ. ತೊಟ್ಟಿಗಳಲ್ಲಿ ದ್ರಾಕ್ಷಾರಸ ಇಲ್ಲದಂತಾಗಿದೆ. ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಆನಂದ ಧ್ವನಿಗೈಯುತ್ತಿಲ್ಲ. ಕೇಳಿಸುವಾ ಧ್ವನಿ ಆನಂದ ಧ್ವನಿ ಅಲ್ಲ.


ಆ ಊರಿನವರು ಒಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯ್ದು, ಆಲೆಗಳಲ್ಲಿ ರಸ ತೆಗೆದು, ತಮ್ಮ ದೇವರ ಗುಡಿಗೆ ಹೋಗಿ, ಹಬ್ಬಮಾಡಿ, ಉಂಡು, ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ಸರ್ವೇಶ್ವರ ಪ್ರಸನ್ನ ಮುಖದಿಂದ ನಿಮ್ಮನ್ನು ನೋಡಿ ನಿಮಗೆ ದಯೆ ತೋರಲಿ!


ನಿನಗೆ ಮೊರೆಯಿಡುವೆ, ನನಗಾಗದಿರಲಿ ಹೇ ಪ್ರಭು, ಮಾನಭಂಗ I ದುರುಳರಿಗಾಗಲೀ ಆಶಾಭಂಗ, ಮೂಕರಾಗವರು ಸೇರಲಿ ನರಕ II


ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ I ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ II


ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು