Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:11 - ಕನ್ನಡ ಸತ್ಯವೇದವು C.L. Bible (BSI)

11 ಅಗಲಿಸಬೇಡ ಪ್ರಭೂ, ನಿನ್ನ ಕೃಪೆಯನು ನನ್ನಿಂದ I ನಿನ್ನ ಪ್ರೀತಿ ಸತ್ಯತೆ ಕಾದಿರಿಸಲಿ ನನ್ನನು ಸತತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನೇ, ನಿನ್ನ ಕರುಣೆಯನ್ನು ನನ್ನಿಂದ ದೂರ ಮಾಡಬೇಡ. ನಿನ್ನ ದಯೆಯೂ ನಂಬಿಗಸ್ತಿಕೆಯೂ ನನ್ನನ್ನು ಸಂರಕ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ನಿಮ್ಮ ಕರುಣೆಯನ್ನು ನನ್ನಿಂದ ಹಿಂತೆಗೆಯಬೇಡಿರಿ; ನಿಮ್ಮ ಪ್ರೀತಿಯೂ ನಿಮ್ಮ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:11
10 ತಿಳಿವುಗಳ ಹೋಲಿಕೆ  

ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II


ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II


ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II


ಪ್ರೀತಿಸತ್ಯತೆಗಳು ರಾಜನನ್ನು ಕಾಪಾಡುವ ಕವಚ; ಕರುಣೆಯೇ ಅವನ ಸಿಂಹಾಸನಕ್ಕೆ ಸ್ಥಿರಾಧಾರ.


ಆಲಿಸೆನ್ನ ಪ್ರಭು, ನಿನ್ನ ಪ್ರೀತಿ ಸುಮಧುರ I ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ II


ದೇವರ ಸಾನ್ನಿಧ್ಯದಲಿ ಆತನು ಸದಾ ಸಾಮ್ರಾಜ್ಯವಾಳಲಿ I ನಿನ್ನಯ ಪ್ರೀತಿ ಸತ್ಯತೆಗಳು ಆತನಿಗೆ ಬೆಂಗಾವಲಾಗಿರಲಿ II


ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ I ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ II


ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ನಿನ್ನಚಲ ಪ್ರೀತಿ ಪ್ರಭು, ನನಗೆ ಶಾಶ್ವತ ಸಿದ್ಧ I ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು