Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:17 - ಕನ್ನಡ ಸತ್ಯವೇದವು C.L. Bible (BSI)

17 ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನಾದರೋ ಕುಗ್ಗಿದವನೂ ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ ರಕ್ಷಕನೂ ಆಗಿದ್ದೀ; ತಡಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಡೆಯನೇ, ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. ನನಗೆ ಸಹಾಯಮಾಡಿ ನನ್ನನ್ನು ರಕ್ಷಿಸು. ನನ್ನ ದೇವರೇ, ತಡಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ; ಆದರೂ ಯೆಹೋವ ದೇವರು ನನ್ನ ಹಿತಚಿಂತಕರಾಗಿದ್ದಾರೆ. ನನ್ನ ದೇವರೇ ನೀವೇ ನನ್ನ ಸಹಾಯವೂ ನನ್ನ ವಿಮೋಚಕರೂ ಆಗಿದ್ದೀರಿ, ನೀವು ತಡಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:17
20 ತಿಳಿವುಗಳ ಹೋಲಿಕೆ  

ದೇವಾ, ನಾ ದಿಕ್ಕಿಲ್ಲದವನು, ಕುಗ್ಗಿದವನು, ನನ್ನ ಬಳಿಗೆ ಬಾ I ನೀನೆನಗೆ ಸಹಾಯಕನು, ರಕ್ಷಕನು ಪ್ರಭು, ತಡಮಾಡದೆ ಬಾ II


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.


ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II


ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.


ನನಗಿದೋ ದೇವನೆ ಸಹಾಯಕನು I ಆತನೆನಗೆ ಜೀವಪೋಷಕನು II


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಹೇ ಪ್ರಭು, ನೀಡೆನಗೆ ಸದುತ್ತರವನು I ಕಿವಿಗೊಡು, ದೀನನು, ದಲಿತನು ನಾನು II


ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II


ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಬಡವ ನಾನು, ನನಗಿದೆ ಕುಂದುಕೊರತೆ I ನನ್ನ ಎದೆಗೆ ಅಲಗೇ ನಾಟಿದಂತಿದೆ II


ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II


ನನಗೆ ನ್ಯಾಯ ಬಯಸುವವರು ನಲಿದು ಮಾಡಲಿ ಜಯಕಾರ I “ದಾಸನ ಹಿತೈಷಿ ಪ್ರಭುಗೆ, ಜೈ” ಎಂಬ ನಿರಂತರ ಪ್ರಚಾರ II


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು