Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:2 - ಕನ್ನಡ ಸತ್ಯವೇದವು C.L. Bible (BSI)

2 ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು. ಆತನು ನನ್ನನ್ನು ಕೆಸರಿನ ಸ್ಥಳದಿಂದ ಮೇಲೆತ್ತಿ ಬಂಡೆಯ ಮೇಲಿರಿಸಿದನು; ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನನ್ನು ಜಾರುವ ಗುಂಡಿಯೊಳಗಿಂದ ಎತ್ತಿದರು. ಕೆಸರಿನ ಮಣ್ಣಿನಿಂದ ಎಬ್ಬಿಸಿದರು. ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ, ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:2
24 ತಿಳಿವುಗಳ ಹೋಲಿಕೆ  

ಪ್ರಭುವಿಗೆ ಪ್ರಿಯವು ಮಾನವನ ಪ್ರವರ್ತನ I ಅವನ ನಡತೆಗೆ ಆತನೆ ಮಾರ್ಗದರ್ಶನ II


ನಿನ್ನ ನುಡಿಗನುಸಾರ ದೃಢಪಡಿಸು ನನ್ನ ನಡತೆಯನು I ಕೆಡುಕೊಂದೂ ಅಧೀನಪಡಿಸದಿರಲಿ ನನ್ನನು II


ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II


ಎದೆಗುಂದಿ ಮೊರೆಯಿಡುತ್ತಿರುವೆ ಜಗದೆಲ್ಲೆಯಿಂದ I ಹತ್ತಲಾಗದ ಆಶ್ರಯಗಿರಿಗೆ ಹತ್ತಿಸೆನ್ನ II


ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II


ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II


ಮುಳುಗುತಿಹೆನು ಕಳ್ಳುಸುಬಿನಲಿ; ಕಾಲೂರಲೆನಗೆ ನೆಲವಿಲ್ಲ I ಸಿಕ್ಕಿಹೆನು ಆಳ ಮಡುವಿನಲ್ಲಿ, ಹುಚ್ಚುಹೊಳೆ ಕೊಚ್ಚುತ್ತಿದೆಯಲ್ಲಾ II


ರಕ್ತ ಸುರಿಸಿ ನೀವು ನನ್ನೊಡನೆ ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಕರೆತರುವೆನು ನಿಮ್ಮವರನು ಸೆರೆಯಾಳತ್ವದಿಂದ ಮೇಲೆತ್ತುವೆನು ನಿಮ್ಮವರನು ಆ ಸೆರೆಬಾವಿಯಿಂದ.


ನೀನಿತ್ತೆ ನನ್ನ ಪಾದಗಳಿಗೆ ವಿಶಾಲಸ್ಥಳ I ನನ್ನ ಹೆಜ್ಜೆಗಳು ಕದಲವು ಈ ನಿಮಿತ್ತ II


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಮಾಡಿಹನು ನನ್ನ ಪ್ರಾಣ ನೆಲಕಚ್ಚುವಂತೆ ಬೆನ್ನಟ್ಟಿಹಾ ವೈರಿ I ದೂಡಿಹನು ಎಂದೊ ಸತ್ತ ಶವದಂತೆ ಕಾರ್ಗತ್ತಲೆಗಾ ದ್ರೋಹಿ II


ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II


ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II


ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.”


ತಳ್ಳುವವರನು ಖೈದಿಗಳ ಗುಂಪಿನಂತೆ ನೆಲಮಾಳಿಗೆಗೆ, ಇರುವರವರು ಸೆರೆಯಲಿ ಬಹುದಿನಗಳವರೆಗೆ, ತದನಂತರ ಗುರಿಯಾಗುವರು ದಂಡನೆಗೆ.


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು