ಕೀರ್ತನೆಗಳು 40:3 - ಕನ್ನಡ ಸತ್ಯವೇದವು C.L. Bible (BSI)3 ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ನನ್ನ ಬಾಯಲ್ಲಿ ನೂತನಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಬಾಯಲ್ಲಿ ನೂತನ ಹಾಡನ್ನು ಹುಟ್ಟಿಸಿದ್ದಾರೆ, ಆ ಹಾಡು ನಮ್ಮ ದೇವರ ಸ್ತೋತ್ರವೇ. ಅನೇಕರು ಇದನ್ನು ಕಂಡು, ಭಯಪಟ್ಟು ಯೆಹೋವ ದೇವರಲ್ಲಿ ಭರವಸೆ ಇಡುವರು. ಅಧ್ಯಾಯವನ್ನು ನೋಡಿ |