Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:4 - ಕನ್ನಡ ಸತ್ಯವೇದವು C.L. Bible (BSI)

4 ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು I ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾರು ಅಹಂಕಾರಿಗಳ ಜೊತೆಯಲ್ಲಿಯೂ, ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾವನು ಅಹಂಕಾರಿಗಳಲ್ಲಿಯೂ ಸುಳ್ಳನ್ನು ಹಿಂಬಾಲಿಸುವವರಲ್ಲಿಯೂ ಸೇರದೆ ಯೆಹೋವನನ್ನೇ ನಂಬುತ್ತಾನೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೋ ಅವನೇ ಧನ್ಯನು. ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳುದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರನ್ನು ತನ್ನ ಭರವಸೆಯಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳದೆಯೂ ಇರುವ ಮನುಷ್ಯನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:4
16 ತಿಳಿವುಗಳ ಹೋಲಿಕೆ  

ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು


ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II


ಶಾಪಗ್ರಸ್ತರು ನಿನ್ನ ಆಜ್ಞೆಗಳನು ಮೀರಿದವರು I ನಿನ್ನ ಧಿಕ್ಕಾರಕ್ಕೆ ಗುರಿಯಾಗುವರು ಆ ಗರ್ವಿಷ್ಠರು II


ನೂತನ ಕೀರ್ತನೆಯನು ಆತನಿಗೆ ಹಾಡಿರಿ I ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ II


ಹುಟ್ಟಿನಿಂದಲೆ ನಾ ನಿನಗಂಟಿಕೊಂಡಿರುವೆನಯ್ಯಾ I ಗರ್ಭದಿಂದಲೆ ನೀ ಎನ್ನನು ಕರೆದುತಂದೆಯಯ್ಯಾ I ನಿರಂತರವೂ ನಿನ್ನನು ಕೊಂಡಾಡುತ್ತಿರುವೆನಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು