Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:5 - ಕನ್ನಡ ಸತ್ಯವೇದವು C.L. Bible (BSI)

5 ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯವು; ಅವು ಅಸಂಖ್ಯಾತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ದೇವರಾದ ಯೆಹೋವ ದೇವರೇ, ನೀವು ಮಾಡಿದ ನಿಮ್ಮ ಅದ್ಭುತಕಾರ್ಯಗಳು ಎಷ್ಟೋ! ನಮ್ಮ ಕಡೆ ನಿಮಗಿರುವ ಯೋಜನೆಗಳೂ ಬಹಳ, ನಿಮಗೆ ಸರಿಸಾಟಿ ಯಾರೂ ಇಲ್ಲ. ನಿಮ್ಮ ಕೃತ್ಯಗಳನ್ನು ನಾನು ತಿಳಿಸಿ ಹೇಳಬೇಕಾದರೆ, ಅವು ಎಣಿಸಲು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:5
14 ತಿಳಿವುಗಳ ಹೋಲಿಕೆ  

ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II


ಪ್ರಭು, ನಿನ್ನ ಕೃತ್ಯಗಳೆನಿತೋ ಅಮೂಲ್ಯ I ನಿನ್ನಾಲೋಚನೆಗಳು ಎನಿತೋ ಅಶೋಧ್ಯ II


ಮಹತ್ಕಾರ್ಯವೆಸಗಬಲ್ಲ ಆ ಏಕೈಕನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II


ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು.


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”


ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು