Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:6 - ಕನ್ನಡ ಸತ್ಯವೇದವು C.L. Bible (BSI)

6 ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಜ್ಞನೈವೇದ್ಯಗಳು ನಿನಗೆ ಇಷ್ಟವಲ್ಲ; ಸರ್ವಾಂಗಹೋಮಗಳನ್ನಾಗಲಿ ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಗ್ರಹಿಸಿಕೊಂಡಿದ್ದೇನೆಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:6
19 ತಿಳಿವುಗಳ ಹೋಲಿಕೆ  

ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.


ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


ಬಲಿಯರ್ಪಣೆಯಲಿ ನಿನಗೊಲವಿಲ್ಲ I ದಹನ ಬಲಿಯಿತ್ತರು ನಿನಗೆ ಬೇಕಿಲ್ಲ II


ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.


‘ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂಬ ವಾಕ್ಯದ ಅರ್ಥ ನಿಮಗೆ ತಿಳಿದಿದ್ದರೆ, ನಿರ್ದೋಷಿಗಳನ್ನು ನೀವು ಖಂಡಿಸುತ್ತಿರಲಿಲ್ಲ.


ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.


ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


ದೇವರು ಅವನ ಕಿವಿಗಳನ್ನು ತೆರೆಯುತ್ತಾನೆ ಉಪದೇಶಮಾಡಿ ಎಚ್ಚರಿಕೆ ನೀಡುತ್ತಾನೆ.


ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತಿಲ್ಲ I ನನ್ನ ಮುಂದಿವೆ ಸತತ ನಿನ್ನ ದಹನಬಲಿಗಳೆಲ್ಲ II


ಆಗ ಅವನ ಯಜಮಾನ ಅವನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬಂದು ಕದದ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ದಬ್ಬಳದಿಂದ ಅವನ ಕಿವಿಚುಚ್ಚಬೇಕು. ಅಂದಿನಿಂದ ಯಜಮಾನನಿಗೆ ಶಾಶ್ವತ ಗುಲಾಮನಾಗಿರುವನು.


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II


ದೇವಾ, ನಿನ್ನ ಯೋಚನೆಗಳೆಷ್ಟು ಅಮೂಲ್ಯ I ಅವುಗಳೆಷ್ಟು ಅಸಂಖ್ಯ, ನನಗದೆಷ್ಟು ಅಗಣ್ಯ II


ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು