Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:7 - ಕನ್ನಡ ಸತ್ಯವೇದವು C.L. Bible (BSI)

7 ನಾನೋಗೊಡುತ ಇಂತೆಂದೆ : “ಇಗೋ ನಾನೇ ಬರುತ್ತಿರುವೆ I ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ನಾನು - ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರಳಿಯಲ್ಲಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ನಾನು, “ಇಗೋ, ಬರುತ್ತಿದ್ದೇನೆ. ನನ್ನ ವಿಷಯವಾಗಿ ಗ್ರಂಥದಲ್ಲಿ ಇದನ್ನು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನಾನು, “ಇಗೋ, ನಾನು ಇದ್ದೇನೆ, ನಾನು ಬಂದಿದ್ದೇನೆ. ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:7
14 ತಿಳಿವುಗಳ ಹೋಲಿಕೆ  

ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನಾ ಕೋರುವುದು ನಿನ್ನ ಮನೆಯ ಹೋರಿಗಳನಲ್ಲ I ನಾ ಬಯಸುವುದು ನಿನ್ನ ಮಂದೆಯ ಹೋತಗಳನಲ್ಲ II


ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II


ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು