Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:8 - ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:8
14 ತಿಳಿವುಗಳ ಹೋಲಿಕೆ  

ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II


ನಿನ್ನ ಆಜ್ಞೆಗಳಲ್ಲಿದೆ ನನಗಾನಂದ I ಅವುಗಳ ಮೇಲೆಯೆ ನನಗಭಿಮೋದ II


ನಿನ್ನ ಧರ್ಮಶಾಸ್ತ್ರವು ನೀಡಿರದಿದ್ದರೆ ನನಗೆ ಸಂತಸ I ನನಗೊದಗಿದ ವಿಪತ್ತಿನಲೆ ನಾ ಹೊಂದುತ್ತಿದ್ದೆ ವಿನಾಶ II


ಅಲ್ಲೆಲೂಯ I ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು I ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು II


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು