Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:9 - ಕನ್ನಡ ಸತ್ಯವೇದವು C.L. Bible (BSI)

9 ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ I ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು ಧಾರಾಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು. ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ, ಅದು ನಿನಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿಮ್ಮ ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿದೆನು; ಇಗೋ, ನಾನು ನನ್ನ ತುಟಿಗಳಿಂದ ಸಾರದೆ ಇರಲಿಲ್ಲವೆಂದು ನೀವೇ ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:9
14 ತಿಳಿವುಗಳ ಹೋಲಿಕೆ  

ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II


ಬಂದುವು ಆ ವಿಧಿಗಳು ನಿನ್ನ ಬಾಯಿಂದ I ವರ್ಣಿಸುವೆನು ಅವನ್ನು ನನ್ನ ಬಾಯಿಂದ II


ಸೋದರರಿಗೆ, ಸಾರುವೆ ನಿನ್ನ ನಾಮ ಮಹಿಮೆಯನ್ನು I ತುಂಬಿದ ಸಭೆಯಲಿ ಮಾಡುವೆ, ನಿನ್ನ ಸ್ತುತಿಯನ್ನು II


“ಸಾರುವೆನು ನನ್ನ ಸೋದರರಿಗೆ ನಿನ್ನ ಮಹಿಮೆಯನು ಮಾಡುವೆನು ಸಭಾಮಧ್ಯೆ ನಿನ್ನ ಗುಣಗಾನವನು,” ಎಂದೂ


ಮಹಾಸಭೆಯಲ್ಲಾಗ ನಿನ್ನನು ಕೊಂಡಾಡುವೆ I ಬಹುಜನರ ಮುಂದೆ ನಿನ್ನ ಗುಣಗಾನ ಮಾಡುವೆ II


“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ಅವನ ಎದೆಯಲ್ಲಿದೆ ದೇವರ ನಿಯಮ I ನೆಲೆತಪ್ಪದು ಅವನ ನಡತೆಯ ಕ್ರಮ II


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು