Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:1 - ಕನ್ನಡ ಸತ್ಯವೇದವು C.L. Bible (BSI)

1 ದಿಕ್ಕಿಲ್ಲದವನನು ಲಕ್ಷಿಸುವವನು ಧನ್ಯನು I ಆಪತ್ಕಾಲದಲಿ ಆದವನನು ಪ್ರಭು ರಕ್ಷಿಸುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೋ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಡವರನ್ನು ಪರಾಮರಿಸುವವರು ಧನ್ಯರು; ಕೇಡಿನ ಸಮಯದಲ್ಲಿ ಯೆಹೋವ ದೇವರು ಅವರನ್ನು ತಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:1
27 ತಿಳಿವುಗಳ ಹೋಲಿಕೆ  

ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಮಾನನಷ್ಟವಿರದು ಕಷ್ಟಕಾಲದಲಿ I ಕುಂದುಕೊರತೆಯಿರದು ಬರಗಾಲದಲಿ II


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಅವರಿಗೆ ಯಾವಾಗ ಬೇಕಾದರೂ ನೀವು ಸಹಾಯ ಮಾಡಬಹುದು. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.


ದಾನ ನೀಡುವನು, ಸಾಲ ನಿರಾಕರಿಸನು ಸಜ್ಜನನು I ಆತನ ಸಂತಾನ ಹೊಂದುವುದು ಆಶೀರ್ವಾದವನು II


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.


ಅದನ್ನು ನೋಡಿ ನವೊಮಿ, “ನೀನು ಈ ದಿನ ಎಲ್ಲಿ ಹಕ್ಕಲಾಯ್ದೆ? ಯಾರ ಹೊಲದಲ್ಲಿ ಕೆಲಸಮಾಡಿದೆ? ನಿನಗೆ ದಯೆ ತೋರಿಸಿದವನಿಗೆ ಶುಭವಾಗಲಿ!” ಎಂದಳು. ಅದಕ್ಕೆ ರೂತಳು, “ನಾನು ತೆನೆ ಆಯ್ದುಕೊಂಡ ಹೊಲವು ಬೋವಜನದು,” ಎಂದು ಹೇಳಿದಳು.


ಆದರೆ ಆ ದಿನದಲ್ಲಿ ನಿನ್ನನ್ನು ನಾನು ಉದ್ಧರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ನೀನು ಯಾರಿಗಾಗಿ ಭಯಪಡುತ್ತಿಯೋ ಅವರ ಕೈಗೆ ಸಿಕ್ಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು