Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:12 - ಕನ್ನಡ ಸತ್ಯವೇದವು C.L. Bible (BSI)

12 ನಿರ್ದೋಷಿಯಾದೆನ್ನನು ನೀನುದ್ಧರಿಸುವೆ I ಚಿರಕಾಲ ನಿನ್ನ ಸನ್ನಿಧಿಯಲ್ಲೆನ್ನನು ಇರಿಸುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿರಪರಾಧಿಯಾದ ನನಗೆ ಸಹಾಯಮಾಡು. ನಿನ್ನ ಸನ್ನಿಧಿಯಲ್ಲಿ ಯಾವಾಗಲೂ ನಿನ್ನ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ನೀವು ನನ್ನ ಪ್ರಾಮಾಣಿಕತೆಯ ಕಾರಣ ನನ್ನನ್ನು ಎತ್ತಿ ಹಿಡಿದಿರುವಿರಿ; ನೀವು ನನ್ನನ್ನು ನಿತ್ಯವಾಗಿ ನಿಮ್ಮ ಸಮ್ಮುಖದಲ್ಲಿ ಇರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:12
11 ತಿಳಿವುಗಳ ಹೋಲಿಕೆ  

ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು.


ಬತ್ತಿಹೋಗುವುದು ದುರ್ಜನರ ಭುಜಬಲ I ಸತ್ಯವಂತರಿಗೆ ಪ್ರಭುವೇ ಉನ್ನತಬಲ II


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ನನ್ನಾತ್ಮ ನಿನಗಾತುಕೊಂಡಿದೆ I ನಿನ್ನ ಬಲಗೈ ನನಗಿಂಬಾಗಿದೆ II


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ I ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ II


ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ I ನಿನ್ನ ಅಚಲ ಪ್ರೀತಿ, ಪ್ರಭು ನೆರವಾಯಿತೆನಗೆ II


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


‘ಹೇ ಪ್ರಭು, ಎನ್ನ ದೇವಾ ‘ ಎಂದೆ I ನಾ ಮೊರೆಯಿಡೆ, ನೀ ಗುಣಪಡಿಸಿದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು