Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:13 - ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. ಆಮೆನ್, ಆಮೆನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ, ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:13
19 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.


ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II


ಪ್ರಭುವನು ಸ್ತುತಿಸಲಿ ಉಸಿರಿರುವುದೆಲ್ಲವೂ I ಪ್ರಭುವಿಗೆ ಸ್ತೋತ್ರವಾಗಲಿ ಅಲ್ಲೆಲೂಯ! II


“ಆಮೆನ್‍, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!


“ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ!


ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II


“ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ.


ಯೆಹೋಯಾದಾವನ ಮಗ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ; ನನ್ನ ಒಡೆಯರ ಹಾಗು ಅರಸರ ದೇವರಾದ ಸರ್ವೇಶ್ವರ ಇದನ್ನು ಸ್ಥಿರಪಡಿಸಲಿ.


ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.


ಶಾಪತರುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ,” ಎಂದು ಹೇಳಬೇಕು. ಅದಕ್ಕೆ ಆ ಹೆಂಗಸು, “ಆಗಲಿ, ಹಾಗೆಯೇ ಆಗಲಿ,” ಎಂದು ಹೇಳಬೇಕು.


ಆಧಾರವಾಗಿಹನು ಪ್ರಭು ದೀನರಿಗೆ I ತುಳಿದುಬಿಡುವನು ದುರ್ಜನರನು ನೆಲಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು