ಕೀರ್ತನೆಗಳು 41:3 - ಕನ್ನಡ ಸತ್ಯವೇದವು C.L. Bible (BSI)3 ರೋಗದಿ ಹಾಸಿಗೆ ಹಿಡಿದಿರಲು ಪ್ರಭು ಸುಧಾರಿಸುವನು I ರೋಗ ನಿವಾರಿಸಿ ಅವನಿಗೆ ಆರೋಗ್ಯವನೀಯುವನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ ಆರೋಗ್ಯವನ್ನುಂಟುಮಾಡಿದಿಯಲ್ಲಾ, ಸ್ವಾಮೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ ಯೆಹೋವನು ಅವನಿಗೆ ಬಲವನ್ನು ಕೊಡುವನು. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿದ್ದರೂ ಯೆಹೋವನು ಅವನನ್ನು ಗುಣಪಡಿಸುವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಬಡವರನ್ನು ಪರಾಮರಿಸುವವರನ್ನು ಯೆಹೋವ ದೇವರು ವ್ಯಾಧಿಯ ಮಂಚದಲ್ಲಿ ಬಲಪಡಿಸುವರು; ಅವರ ಅಸ್ವಸ್ಥತೆಯನ್ನು ಯೆಹೋವ ದೇವರು ಹೋಗಲಾಡಿಸಿ ಮರುಸ್ಥಾಪಿಸುವರು. ಅಧ್ಯಾಯವನ್ನು ನೋಡಿ |
ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.