Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:5 - ಕನ್ನಡ ಸತ್ಯವೇದವು C.L. Bible (BSI)

5 “ಇವನ ಸಾವೆಂದು? ಇವ ನಿರ್ನಾಮವಾಗುವದೆಂತು?” I ನನಗೆ ಕೇಡು ಬಯಸುವವರ ಕುಹಕ ನುಡಿಯಿದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು - ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆಹೋದೀತು ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ, ಅವನ ಹೆಸರು ಯಾವಾಗ ಅಳಿದುಹೋಗುತ್ತದೆ” ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಅವನು ಸತ್ತು ಅವನ ಹೆಸರು ನಾಶವಾಗುವುದು ಯಾವಾಗ?” ಎಂದು ನನ್ನ ಶತ್ರುಗಳು ನನ್ನ ಕೇಡನ್ನು ಬಯಸಿ ಮಾತನಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:5
13 ತಿಳಿವುಗಳ ಹೋಲಿಕೆ  

ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ವೈರಿಗಳು ದಿನವಿಡೀ ನನ್ನ ನಿಂದಿಸುತ್ತಿಹರು I ದ್ವೇಷಿಗಳು ನನ್ನ ಹೆಸರೆತ್ತಿ ಶಪಿಸುತ್ತಿಹರು II


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ತನ್ನ ಮಲದ ಹಾಗೆ ನಿತ್ಯಕ್ಕು ಅವನು ನಶಿಸಿಹೋಗುವನು ಅವನನು ಅರಿತವರೆಲ್ಲರೂ “ಅವನೆಲ್ಲಿಯೋ!’ ಎಂದು ಹೇಳುವರು.


ಅವನ ಸ್ಮರಣೆ ಅಳಿದುಹೋಗುವುದು ಜಗದಲಿ ಇಲ್ಲವಾಗುವುದು ಅವನ ಹೆಸರು ನಾಡಿನಲಿ.


ಒಪ್ಪಿಕೊಂಡೆನಿದೋ, ನಾನೇ ಅಪರಾಧಿ I ಕಟ್ಟಿದಂತಿದೆ ಕಣ್ಗೆ ಪಾಪ ದಿನವಿಡಿ II


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ವಿರೋಧಿಗಳು ದಿನವಿಡೀ ಬೆನ್ನಟ್ಟಿ ಬರುತಿಹರು I ಸೊಕ್ಕಿನಿಂದ ನನಗೆದುರಾಗಿ ನಿಂತಿರುವರು ಹಲವರು II


ನನ್ನ ಕಾರ್ಯವನು ಕೈಗೂಡಿಸುವ ದೇವನಿಗೆ I ನಾ ಮೊರೆಯಿಡುವೆ ಪರಾತ್ಪರನಾದಾ ಕರ್ತನಿಗೆ II


ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ I ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ II


ನೀನೆನಗೆ ದೇವನು, ಕರುಣಿಸೆನ್ನನು I ದಿನವೆಲ್ಲ ಪ್ರಭು, ನಿನಗೆ ಮೊರೆಯಿಡುವೆನು II


ಕಟಾಕ್ಷವಿಟ್ಟು ಕರುಣಿಸೆನ್ನನು I ನೀಡು ನಿನ್ನ ದಾಸನಿಗೆ ಬಲವನು I ರಕ್ಷಿಸು ನಿನ್ನ ದಾಸಿಯ ಮಗನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು