ಕೀರ್ತನೆಗಳು 41:6 - ಕನ್ನಡ ಸತ್ಯವೇದವು C.L. Bible (BSI)6 ನೋಡಬರುವರು, ನವಿರಾದ ಮಾತನಾಡುವರವರು I ಕೇಡನೆ ತುಂಬಿಸಿಕೊಂಡು ಹೊರಬಂದೊಡನೆ ಹರಡುವರು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರಲ್ಲೊಬ್ಬನು ನನ್ನನ್ನು ನೋಡುವದಕ್ಕೆ ಬಂದರೆ ಕಪಟದ ಮಾತನ್ನಾಡುವನು; ಮನಸ್ಸಿನಲ್ಲಿ ಅಶುಭಗಳನ್ನು ಸಂಗ್ರಹಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನನ್ನನ್ನು ನೋಡಲು ಬಂದವರು ಕಪಟದ ಮಾತನ್ನಾಡುವರು; ಅವರು ನನ್ನ ಸಮಾಚಾರವನ್ನು ಸಂಗ್ರಹಿಸಿಕೊಂಡು ಸುಳ್ಳುಸುದ್ದಿಯನ್ನು ಹಬ್ಬಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನನ್ನು ನೋಡುವುದಕ್ಕೆ ಅವರಲ್ಲಿ ಒಬ್ಬನು ಬಂದರೆ, ಕಪಟವಾಗಿ ಮಾತನಾಡುತ್ತಾನೆ. ಅವನ ಹೃದಯ ಕೇಡನ್ನು ಕೂಡಿಟ್ಟುಕೊಳ್ಳುತ್ತಿದೆ. ಅವನು ಹೊರಗೆ ಹೋದ ಮೇಲೆ ಕೇಡನ್ನು ಹಬ್ಬಿಸುತ್ತಾನೆ. ಅಧ್ಯಾಯವನ್ನು ನೋಡಿ |