Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:7 - ಕನ್ನಡ ಸತ್ಯವೇದವು C.L. Bible (BSI)

7 ಹಗೆಯವರು ಎನಗೆ ವಿರುದ್ಧ ಗುಜುಗುಟ್ಟುತಿಹರು I ಅವರೆಲ್ಲರು ಎನಗೆ ಕೇಡನೆ ಕಲ್ಪಿಸುತಿಹರು: II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಹಗೆಯವರೆಲ್ಲರು ನನಗೆ ವಿರೋಧವಾಗಿ ಕಿವಿಗಳಲ್ಲಿ ಗುಜುಗುಜು ಮಾತಾಡಿಕೊಳ್ಳುತ್ತಾರೆ; ನನಗೆ ಕೇಡನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ವೈರಿಗಳು ನನಗೆ ವಿರೋಧವಾಗಿ ಗುಟ್ಟಾಗಿ ಮಾತಾಡಿಕೊಳ್ಳುವರು; ನನಗೆ ಕೇಡುಮಾಡಲು ಆಲೋಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ಶತ್ರುಗಳೆಲ್ಲರೂ ಸೇರಿ ನನ್ನ ಮೇಲೆ ಪಿಸುಗುಟ್ಟುತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:7
8 ತಿಳಿವುಗಳ ಹೋಲಿಕೆ  

ತುಂಟನು ಜಗಳವನ್ನು ಹುಟ್ಟಿಸುತ್ತಾನೆ; ಚಾಡಿಕೋರನು ಮಿತ್ರರನ್ನು ಬೇರ್ಪಡಿಸುತ್ತಾನೆ.


ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ಅನಂತರ ಫರಿಸಾಯರು ಒಟ್ಟುಗೂಡಿ ಯೇಸುವನ್ನು ಹೇಗೆ ಮಾತಿನಲ್ಲಿ ಸಿಕ್ಕಿಸುವುದೆಂದು ಸಮಾಲೋಚನೆ ಮಾಡಿಕೊಂಡರು.


ಸೌದೆಯಿಲ್ಲದಿದ್ದರೆ ಬೆಂಕಿ ಆರುವುದು; ಚಾಡಿಕೋರನಿಲ್ಲದಿದ್ದರೆ ಜಗಳ ಶಮನವಾಗುವುದು.


ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು