Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:9 - ಕನ್ನಡ ಸತ್ಯವೇದವು C.L. Bible (BSI)

9 ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಯಾವನನ್ನು ನಂಬಿದ್ದೆನೋ ಯಾವನು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ ಅಂಥ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನ ರೊಟ್ಟಿಯನ್ನು ತಿಂದವನೂ ನಾನು ನಂಬಿದ್ದವನೂ ಆಗಿರುವ ನನ್ನ ಆಪ್ತ ಸ್ನೇಹಿತನು ಸಹ ನನಗೆ ವಿರೋಧವಾಗಿ ತನ್ನ ಕಾಲನ್ನು ಎತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:9
13 ತಿಳಿವುಗಳ ಹೋಲಿಕೆ  

“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ಕೈ ಅದ್ದಿ ಉಣ್ಣುವವನೇ ನನಗೆ ದ್ರೋಹ ಬಗೆಯುತ್ತಾನೆ.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ನನ್ನ ನೋಡಿ ಆಪ್ತಮಿತ್ರರೆಲ್ಲರು ಹೇಸಿಕೊಳ್ಳುತ್ತಾರೆ ನನ್ನ ಮೇಲೆ ನನ್ನ ಪ್ರೀತಿಪಾತ್ರರೂ ತಿರುಗಿಬಿದ್ದಿದ್ದಾರೆ.


ನನ್ನ ಮಿತ್ರಮಂಡಲಿಯವರೇ ನಿನ್ನನ್ನು ಬೆನ್ನಟ್ಟಿಬಂದಿದ್ದಾರೆ. ನಿನ್ನನ್ನು ಗಡಿಯಾಚೆ ತಳ್ಳಿಬಿಟ್ಟಿದ್ದಾರೆ. ನಿನ್ನ ಆಪ್ತರೇ ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ತಿಳಿಗೇಡಿಯಾದ ನಿನಗೆ ಉರುಲೊಡ್ಡಿದ್ದಾರೆ


ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.


ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


ಸೋದರನನ್ನೂ ನನ್ನಿಂದ ದೇವರು ದೂರವಾಗಿರಿಸಿದ್ದಾನೆ ಪರಿಚಿತರೆಲ್ಲರು ನನ್ನನು ತೊರೆದುಬಿಟ್ಟಿದ್ದಾರೆ.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು